ಗುಬ್ಬಿ
ಭಾರತ ಸ್ವಾತಂತ್ರ್ಯಕ್ಕಾಗಿ ಹಗಲಿರುಳು ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಸಮಗ್ರವಾದ ಮಾಹಿತಿ ತಿಳಿದುಕೊಂಡು ಅವರ ಆದರ್ಶಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಅಳವಡಿಸಿಕೊಂಡಾಗ ಸಮೃದ್ಧ ಭಾರತ ನಿರ್ಮಾಣ ಮಾಡಲು ಸಾಧ್ಯ ಎಂದು ಲಯನ್ಸ್ ಸಂಸ್ಥೆಯ ಅಧ್ಯಕ್ಷ ಉಂಡೆರಾಮಯ್ಯ ತಿಳಿಸಿದರು.
ತಾಲ್ಲೂಕಿನ ಕಕ್ಕೇನಹಳ್ಳಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಸಂಸ್ಥೆ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ ಮತ್ತು ಪರಿಸರ ಅರಿವಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕತೆ ಬೆಳೆದಂತೆ ನಮ್ಮ ಅಮೂಲ್ಯವಾದ ಪರಿಸರ ವಿನಾಶದಂಚಿಗೆ ತಲುಪಿದ್ದು ವಿದ್ಯಾರ್ಥಿಗಳು ಶಿಕ್ಷಣದ ಜೊತÉಗೆ ಪರಿಸರ ಸಂರಕ್ಷಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಕರೆನೀಡಿದರು.
ಇತ್ತೀಚಿನ ದಿನಗಳಲ್ಲಿ ನಮ್ಮ ಅರಣ್ಯ ಸಂಪತ್ತು ಹಾಳಾಗುತ್ತಿದ್ದು ಗಿಡಮರಗಳ ಸಂಖ್ಯೆ ಕಡಿಮೆಯಾದಂತೆ ಸಮರ್ಪಕವಾಗಿ ಮಳೆ ಬಾರದೆ ಅಂತರ್ಜಲ ಕುಸಿತಗೊಂಡಿದೆ. ಮುಂದಿನ ದಿನಗಳಲ್ಲಾದರೂ ನಮ್ಮ ಅರಣ್ಯ ಸಂಪತ್ತನ್ನು ಹೆಚ್ಚಿಸಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಗಿಡಮರಗಳನ್ನು ಬೆಳೆಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ತಿಳಿಸಿದರು.
ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಜಿ.ಬಿ.ಮಲ್ಲಪ್ಪ ಮಾತನಾಡಿ ಪರಿಸರ ಸಂರಕ್ಷಣೆಯಿಂದ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದ್ದು ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯ ಜೊತೆಗೆ ಪರಿಸರ ರಕ್ಷಣೆಯ ಬಗ್ಗೆ ಸಮಗ್ರವಾದ ಮಾಹಿತಿ ಪಡೆದುಕೊಂಡು ವಿನಾಶದಂಚಿಗೆ ತಲುಪಿರುವ ನಮ್ಮ ಅಮೂಲ್ಯವಾದ ಪರಿಸರವನ್ನು ಉಳಿಸಿ ಬೆಳೆಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ವಿದ್ಯಾರ್ಥಿಗಳಿಂದ ನೆಡಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಗಂಗಣ್ಣ, ಲಯನ್ಸ್ ಸಂಸ್ಥೆಯ ಖಜಾಂಚಿ ಸಿದ್ದಪ್ಪ ಗುಜ್ಜರಿ, ಪದಾಧಿಕಾರಿಗಳಾದ ಡಿ.ಆರ್.ಕೀರ್ತಿರಾಜ್, ಎಸ್.ಆರ್.ರೇಣುಕಪ್ಪ, ಲಕ್ಷ್ಮೀಪತಿ, ಶ್ರೀನಿವಾಸ್ ಮುಖಂಡ ದೊಡ್ಡಯ್ಯ, ಪಾರ್ವತಮ್ಮ, ಸಹಶಿಕ್ಷಕಿ ಜಯಂತಿಮಾಲ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರತಿದಿನದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿಯ facebook page like ಮಾಡಿ