ಮಂಡ್ಯ:
ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿಗೂ ಹೆಚ್ಚು ಹಣವನ್ನು ವಶಕ್ಕೆ ಪಡೆಯಲಾಗಿದೆ.
ಗಿರೀಶ್ ಎಂಬುವರು ಕ್ರೆಟಾ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆರ್.ಪೇಟೆ ಕಡೆಗೆ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಚುನಾವಣಾಧಿಕಾರಿಗಳು ಈ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಗಿರೀಶ್ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹಣವನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದರು.
ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಕೊಂಗಬೋರನದೊಡ್ಡಿ ಗ್ರಾಮದ ಬಳಿ ಚೆಕ್ಪೋಸ್ಟ್ ಆರಂಭಿಸಿ ವಾಹನಗಳನ್ನು ತಡೆದು ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ.ಗಿರೀಶ್ ಹಣಕ್ಕೆ ಪೂರಕ ದಾಖಲೆ ನೀಡಿರಲಿಲ್ಲ. ಹೀಗಾಗಿ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದರು. ನಂತರ ಅಧಿಕಾರಿಗಳು ಮದ್ದೂರು ಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.