ಚಿತ್ರದುರ್ಗ: ಸಿಲಿಂಡರ್‌ ಸ್ಪೋಟ : 1 ಸಾವು…..!

ಚಿತ್ರದುರ್ಗ: 

    ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ಎಲ್​​ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ದಾರುಣ ಘಟನೆ ಭಾನುವಾರ ನಡೆದಿದೆ. 

   ಮೃತ ಮಹಿಳೆಯನ್ನು ಲಕ್ಷ್ಮಮ್ಮ(38) ಎಂದು ಗುರುತಿಸಲಾಗಿದ್ದು, ರೇಣುಕಮ್ಮ ಮತ್ತು ರಚನಾ ಎಂಬುವರಿಗೆ ಗಾಯಗಳಾಗಿವೆ. ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

   ಪರಮೇಶ್ ಎಂಬುವವರ ಬೀದಿ ಬದಿ ಹೋಟೆಲ್​​ಗೆ ಬೆಂಕಿ ಬಿದ್ದಿದ್ದು, ವಿಚಾರ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿದ್ದ ಮಹಿಳಾ ಕಾರ್ಮಿಕರು ಬೀದಿ ಬದಿ ಹೋಟೆಲ್​​ನತ್ತ ಧಾವಿಸಿದ್ದಾರೆ. ಈ ವೇಳೆ ಹೋಟೆಲ್​​ನಲ್ಲಿದ್ದ ಸಿಲಿಂಡರ್​ ಸ್ಪೋಟಗೊಂಡಿದೆ.

    ಸಿಲಿಂಡರ್​ ಸ್ಪೋಟದಿಂದ ಸ್ಥಳದಲ್ಲಿದ್ದ ಮಹಿಳಾ ಕಾರ್ಮಿಕ ಲಕ್ಷ್ಮಮ್ಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap