ಬಿ ಆರ್‌ ಎಸ್‌ ಸಮಾವೇಶದಲ್ಲಿ ಸಿಲಿಂಡರ್‌ ಸ್ಪೋಟ :1 ಸಾವು

ಖಮ್ಮಂ:

         ಕಾರೇಪಲ್ಲಿ ಮಂಡಳದ ಚಿಮಲಪಾಡುವಿನಲ್ಲಿ ಆಡಳಿತಾರೂಢ ಬಿಆರ್‌ಎಸ್ ಆಯೋಜಿಸಿದ್ದ  ಸಮಾವೇಶದ ವೇಳೆ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ಸಾವನ್ನಪ್ಪಿದ್ದು, ಪೊಲೀಸ್ ಸಿಬ್ಬಂದಿ, ಪತ್ರಕರ್ತರು ಸೇರಿದಂತೆ ಹಲವರು ತೀವ್ರ ಗಾಯಗೊಂಡಿದ್ದಾರೆ.

     ಬಿಆರ್‌ಎಸ್ ಸಭೆಯಲ್ಲಿ ಉತ್ಸಾಹಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿದ್ದಾರೆ. ಈ ವೇಳೆ ಕಿಡಿ ಪಕ್ಕದ ಹುಲ್ಲಿನ ಮನೆಗೆ ವ್ಯಾಪಿಸಿ ಬೆಂಕಿ ಹೊತ್ತಿಕೊಂಡಿದ್ದು ನಂತರ ಹುಲ್ಲಿನ ಮನೆಯಲ್ಲಿದ್ದ ಹಲವಾರು ಸಿಲಿಂಡರ್‌ಗಳು ಬೆಂಕಿಯಿಂದ ಸ್ಫೋಟಗೊಂಡಿವೆ. ಘಟನೆಯಿಂದ ಮನೆಯಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸ್ಫೋಟದ ರಭಸಕ್ಕೆ ವ್ಯಕ್ತಿಯ ಕಾಲು ಮತ್ತು ಕೈಗಳು ತುಂಡಾಗಿವೆ.

     ಸಿಎಂ ಕೆಸಿಆರ್ ಅವರು ಸಾರಿಗೆ ಸಚಿವ ಪುವ್ವಾಡ ಅಜಯ್ ಕುಮಾರ್ ಮತ್ತು ಸಂಸದ ನಾಮ ನಾಗೇಶ್ವರ ರಾವ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಪಘಾತದ ವಿವರಗಳನ್ನು ತಿಳಿದುಕೊಂಡಿದ್ದಾರೆ. ಮೃತ ಕುಟುಂಬಗಳ ಸದಸ್ಯರನ್ನು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಬೆಂಬಲಿಸಲಾಗುವುದು ಎಂದು ಕೆಸಿಆರ್ ಭರವಸೆ ನೀಡಿದರು. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap