ಶಿವಮೊಗ್ಗ ಗಲಭೆ: ಮೃತ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ. ನೆರವು ಘೋಷಿಸಿದ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು:

ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು 10 ಲಕ್ಷ ರೂ.ಗಳ ನೆರವನ್ನು ಘೋಷಿಸಿದ್ದಾರೆ.

ಈ ಬಗ್ಗೆ ಹೇಳಿಕೆ‌ ನೀಡಿರುವ ಅವರು ಡಾ.ಸಿ.ಎನ್ ಅಶ್ವತ್ಥನಾರಾಯಣ ಫೌಂಡೇಶನ್ ನಿಂದ ಪರಿಹಾರದ ಮೊತ್ತ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಸಚಿವರು ಬುಧವಾರ ಸಂಜೆ ಹರ್ಷ ಅವರ ತಾಯಿ ಜತೆ ದೂರವಾಣಿ ಮೂಲಕ ಮಾತನಾಡಿ ಸಂತ್ವಾನ ಹೇಳಿದರು.

ಹರ್ಷ ಈ ದೇಶ ಮತ್ತು ಸಮಾಜಕ್ಕಾಗಿ ತನ್ನ ಪ್ರಾಣವನ್ನೇ ಸಮರ್ಪಿಸಿದ್ದಾನೆ. ಇಂತಹ ಸಂಕಷ್ಟದ ಸಮಯದಲ್ಲಿ ಆತನ ಕುಟುಂಬದ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯವಾಗಿದೆ. ಘೋಷಿಸಿರುವ ಹಣವನ್ನು ಹರ್ಷನ ತಾಯಿಯವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು,’’ ಎಂದಿದ್ದಾರೆ.

ಮೂಲಭೂತವಾದಿಗಳು ಹರ್ಷನಂತಹ ಒಬ್ಬ ಸೇವಾ ಮನೋಭಾವದ ವ್ಯಕ್ತಿಯನ್ನು ಬಲಿ ತೆಗೆದುಕೊಂಡಿದ್ದಾರೆ. ದುಷ್ಕರ್ಮಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಶಿವಮೊಗ್ಗದಲ್ಲಿ ನಡೆದಿರುವ ಹೇಯ ಕೃತ್ಯವನ್ನು ಸಂವೇದನಾಶೀಲರೆಲ್ಲ ಖಂಡಿಸಬೇಕು,’’ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಸರಕಾರವು ಸಮಾಜದಲ್ಲಿ ಸೌಹಾರ್ದ ಸ್ಥಾಪನೆಗೆ ಬದ್ಧವಾಗಿದೆ. ನಾಗರಿಕ ಸಮಾಜದಲ್ಲಿ ವಾದ-ವಿವಾದಗಳು ಸಹಜ. ಆದರೆ ಶಿವಮೊಗ್ಗದಲ್ಲಿ ನಡೆದಿರುವುದು ಬರ್ಬರ ಮತ್ತು ಅಮಾನವೀಯ ಘಟನೆಯಾಗಿದೆ. ಸಮಾಜವಿರೋಧಿ ಶಕ್ತಿಗಳನ್ನು ಸರಕಾರವು ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಲಿದೆ.

ಈ ಘಟನೆಯ ಹಿಂದೆ ಯಾರಾರಿದ್ದಾರೆ ಮತ್ತು ಯಾವ್ಯಾವ ಸಂಘಟನೆಗಳ ಕುಮ್ಮಕ್ಕಿದೆ ಎನ್ನುವುದನ್ನು ಶೀಘ್ರವೇ ಪತ್ತೆ ಹಚ್ಚಲಾಗುವುದು’’ ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link