ಲೋಕಸಭೆ ಚುನಾವಣೆ : ಬೆಳಗ್ಗೆ 9 ಗಂಟೆ ವೇಳೆಗೆ ಶೇ. 10.35ರಷ್ಟು ಮತದಾನ

ನವದೆಹಲಿ:

     ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಸೋಮವಾರ ಬೆಳಗ್ಗೆ 9 ಗಂಟೆ ವೇಳೆಗೆ ಶೇ. 10.35ರಷ್ಟು ಮತದಾನವಾಗಿದೆ ಎಂದ ತಿಳಿದುಬಂದಿದೆ,

   10 ರಾಜ್ಯಗಳ 96 ಲೋಕಸಭಾ ಕ್ಷೇತ್ರ, ಆಂಧ್ರಪ್ರದೇಶ ವಿಧಾನಸಭೆಯ ಎಲ್ಲಾ 175 ಕ್ಷೇತ್ರ ಮತ್ತು ಒಡಿಶಾ ವಿಧಾನಸಭೆಯ 28 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

    ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ವರೆಗೂ ಶ.10.35ರಷ್ಟು ಮತದಾನವಾಗಿದೆ.

ಆಂಧ್ರ ಪ್ರದೇಶ:

    ಶೇ.9.05̧ ಬಿಹಾರ: ಶೇ.10.18 ̧ ಜಮ್ಮು ಮತ್ತು ಕಾಶ್ಮೀರ: ಶೇ.5.07 ̧ ಜಾರ್ಖಂಡ್: ಶೇ.11.78 ̧ ಮಧ್ಯಪ್ರದೇಶ: ಶೇ.14.97 ̧ ಮಹಾರಾಷ್ಟ್ರ: ಶೇ.6.45  ̧ ಒಡಿಶಾ: ಶೇ.9.23 ̧ ತೆಲಂಗಾಣ: ಶೇ.9.51 ̧ ಉತ್ತರ ಪ್ರದೇಶ: ಶೇ.11.67  ̧ ಪಶ್ಚಿಮ ಬಂಗಾಳ: ಶೇ.15.24

   ಇದರೊಂದಿಗೆ ಅತೀ ಹೆಚ್ಚು ಮತದಾನ ಪಶ್ಚಿಮ ಬಂಗಾಳದಲ್ಲಿ (ಶೇ.15.24) ನಡೆದಿದ್ದು, ಕಡಿಮೆ ಮತದಾನ ಶೇ.5.07ರೊಂದಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲಾಗಿದೆ.

   ಈ ನಡುವೆ ಪ್ರಧಾನಮತ್ರಿ ನರೇಂದ್ರ ಮೋದಿ ಅವರು ಮತದಾನ ಪ್ರೋತ್ಸಾಹಿಸಿ ಎಕ್ಸ್ ಪೋಸ್ಟ್‌ ಹಾಕಿದ್ದು, ಮತ ಚಲಾಯಿಸಿ, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿ ಎದು ಹೇಳಿದ್ದಾರೆ.

   ಲೋಕಸಭಾ ಚುನಾವಣೆಯ ಇಂದಿನ 4ನೇ ಹಂತದಲ್ಲಿ, 10 ರಾಜ್ಯಗಳು ಮತ್ತು ಯುಟಿಗಳಲ್ಲಿ 96 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಈ ಕ್ಷೇತ್ರಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ; ಯುವ ಮತದಾರರು ಹಾಗೂ ಮಹಿಳಾ ಮತದಾರರು ಮತದಾನಕ್ಕೆ ಶಕ್ತಿ ತುಂಬಲಿದ್ದಾರೆ ಎಂದು ನನಗೆ ಖಾತ್ರಿಯಿದೆ. ಬನ್ನಿ, ನಾವೆಲ್ಲರೂ ನಮ್ಮ ಕರ್ತವ್ಯವನ್ನು ಮಾಡೋಣ ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸೋಣ ಎಂದಿದ್ದಾರೆ.

ಆಂಧ್ರಪ್ರದೇಶ:

    ಅಪಹರಣಕ್ಕೊಳಗಾಗಿದ್ದ TDPಯ ಮತಗಟ್ಟೆ ಏಜೆಂಟರ್‌ ರಕ್ಷಣೆ ಚಿತ್ತೂರು ಜಿಲ್ಲೆಯಲ್ಲಿ ಅಪಹರಣಕ್ಕೊಳಗಾಗಿದ್ದ ಟಿಡಿಪಿಯ ಮೂವರು ಮತಗಟ್ಟೆ ಏಜೆಂಟರನ್ನು ಪತ್ತೆ ಹಚ್ಚಿ, ರಕ್ಷಿಸಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮುಖೇಶ್ ಕುಮಾರ್ ಮೀನಾ ಅವರು ತಿಳಿಸಿದ್ದಾರೆ.

    ಪುಂಗನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಚಿತ್ತೂರು ಜಿಲ್ಲೆಯ ಸೇಡಂ ಮಂಡಲದ ಬೋಕರಮಂಡ ಗ್ರಾಮದಿಂದ ಟಿಡಿಪಿ ಏಜೆಂಟರನ್ನು ಅಪಹರಣ ಮಾಡಲಾಗಿದ್ದು, ‘ಮತಗಟ್ಟೆ 188, 189 ಮತ್ತು 199ಕ್ಕೆ ಸೇರಿದ ಟಿಡಿಪಿ ಏಜೆಂಟರನ್ನು ವೈಎಸ್‌ಆರ್‌ಸಿಪಿ ಮುಖಂಡರು ಮತಗಟ್ಟೆಗೆ ಹೋಗುವಾಗ ಅಪಹರಿಸಿದ್ದಾರೆ ಎಂದು ಟಿಡಿಪಿ ಜಿಲ್ಲಾ ಉಸ್ತುವಾರಿ ಜಗನ್ ಮೋಹನ್ ರಾಜು ದೂರು ನೀಡಿದ್ದರು ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಬಿಗಿ ಭದ್ರತೆ

    4ನೇ ಹಂತದಲ್ಲಿ ಜಮ್ಮು ಮತ್ತು ಕಾಶ್ಮೀರದ ಒಂದು ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದ್ದು, ಪ್ರತಿ ಬೂತ್‌ನಲ್ಲಿ ಬಿಗಿ ಭಧ್ರತೆ ಕಲ್ಪಿಸಲಾಗಿದೆ. ಪುಲ್ವಾಮ, ಬುದ್ಗಾವ್‌ನಲ್ಲಿ ಮತದಾನ ನಡೆಯುತ್ತಿದ್ದು, ಭದ್ರತಾ ಪಡೆಗಳು ಬಿಗಿ ಬಂದೊಬಸ್ತ್ ಕಲ್ಪಿಸಿವೆ.

ನಮ್ಮ ಕಾರ್ಯಕರ್ತರನ್ನು ಗೃಹ ಬಂಧನದಲ್ಲಿರಿಸಲಾಗಿದೆ:

   ಫಾರೂಕ್ ಅಬ್ದುಲ್ಲಾ ಆರೋಪ ಈ ನಡುವೆ ಓಮರ್ ಅಬ್ದುಲ್ಲಾ ಅವರೊಂದಿಗೆ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಫಾರೂಕ್ ಅಬ್ದುಲ್ಲಾ ಅವರು, ಯಾವುದೇ ಹಿಂಸಾಚಾರವಿಲ್ಲ. ಎಲ್ಲವೂ ಸುಗಮವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ನಮ್ಮ ಕಾರ್ಯಕರ್ತರನ್ನು ಕಳೆದ 2 ದಿನಗಳಿಂದ ಗೃಹ ಬಂಧನದಲ್ಲಿಟ್ಟಿದ್ದಾರೆ. ಆದರೂ ಮುಕ್ತ ವಾತಾವರಣದಲ್ಲಿ ಚುನಾವಣೆ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆಂದು ಆರೋಪಿಸಿದ್ದಾರೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap