ಬ್ರೆಜಿಲ್ :
ಖಾಸಗಿ ವಿಮಾನವೊಂದು ದಕ್ಷಿಣ ಬ್ರೆಜಿಲ್‌ನ ಪ್ರವಾಸಿ ನಗರದಲ್ಲಿ ಹಾರಾಟದ ಸಂಧರ್ಭದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ವಸತಿ ಕಟ್ಟಡಗಳಿಗೆ ಅಪ್ಪಳಿಸಿ ವಿಮಾನ ಸ್ಫೋಟಗೊಂಡಿದೆ.
10 ಜನರನ್ನ ಹೊತ್ತು ಮಿನಿ ವಿಮಾನವೊಂದು ಸಾಗುತ್ತಿತ್ತು. ಆದ್ರೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಇದ್ದಕ್ಕಿದಂತೆ ವಿಮಾನವು ಅಂಗಡಿಗಳು ಮತ್ತು ಮನೆಗಳಿಗೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ. ಈ ವಿಮಾನವು ಬ್ರೆಜಿಲ್‌ನ ಉದ್ಯಮಿಯೊಬ್ಬರಿಗೆ ಸೇರಿದ್ದು ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ರಕ್ಷಣಾ ಪಡೆಗಳು ಧಾವಿಸಿದ್ದು, ಕಟ್ಟಡದಲ್ಲಿ ವಾಸಿಸುತ್ತಿದ್ದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಾನವು ಮೊದಲು ಮನೆಯೊಂದರ ಚಿಮಣಿಗೆ ಡಿಕ್ಕಿಯಾಗಿ ನಂತರ ಕಟ್ಟಡದ ಎರಡನೇ ಮಹಡಿಗೆ ಅಪ್ಪಳಿಸಿತು ಎನ್ನಲಾಗಿದೆ. ವಿಮಾನದಲ್ಲಿದ್ದವರು ಪ್ರಾಣ ಕಳೆದುಕೊಂಡಿದ್ದಾರೆ.