ರಾಜ್ಯದಿಂದ 10 ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ….!

ಬೆಂಗಳೂರು:

    ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 400 ಸೀಟುಗಳ ಗುರಿಯಿಟ್ಟಿರುವ ಬಿಜೆಪಿ ಈಗಾಗಲೇ 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬುಧವಾರ ಸಂಜೆಯಿಂದ ತಡರಾತ್ರಿವರೆಗೂ ಎರಡನೇ ಪಟ್ಟಿಗೆ ಸುದೀರ್ಘ ಮೀಟಿಂಗ್ ನಡೆಸಿದೆ. ಈ ಸಭೆಯಲ್ಲಿ ಕರ್ನಾಟಕದ 28 ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಹೆಸರು ಫೈನಲ್ ಮಾಡುವ ಸಂಬಂಧ ಚರ್ಚೆ ಆಗಿದೆ.

    ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಸುಮಾರು 10 ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಯಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಬಿಜೆಪಿಯ ಹಿರಿಯ ನಾಯಕರು ನವದೆಹಲಿಯಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದು, ಶುಕ್ರವಾರ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ.

    ಮಾಜಿ ಸಿಎಂ ಹಾಗೂ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಸೇರಿದಂತೆ ಕರ್ನಾಟಕದ ಪಕ್ಷದ ಮುಖಂಡರು ಬುಧವಾರ ಸಂಜೆ ಸಭೆಯಲ್ಲಿ ಉಪಸ್ಥಿತರಿದ್ದರು.

    ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಮೂರರಿಂದ ನಾಲ್ಕು ಹೆಸರನ್ನು ಪಕ್ಷದ ಹೈಕಮಾಂಡ್‌ಗೆ ಕಳುಹಿಸಲಾಗಿದೆ. ಎಲ್ಲಾ 28 ಲೋಕಸಭಾ ಸ್ಥಾನಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಒಟ್ಟಿಗೆ ಘೋಷಿಸಲಾಗುವುದು. ಬಿಜೆಪಿಗೆ 25 ಮತ್ತು ಜೆಡಿಎಸ್‌ಗೆ ಮೂರು ಸ್ಥಾನಗಳನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಬಿಜೆಪಿ ಮೂಲಗಳು ದಿ ನ್ಯೂಇಂಡಿಯನ್ ಎಕ್ಸ ಪ್ರೆಸ್ ಗೆ ತಿಳಿಸಿವೆ.

    ಬೀದರ್, ಬೆಳಗಾವಿ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಉತ್ತರ ಮತ್ತು ಇತರ ಕೆಲವು ಕ್ಷೇತ್ರಗಳ ಬಿಜೆಪಿ ಸಂಸದರಿಗೆ ಟಿಕೆಟ್ ಸಿಗದಿರಬಹುದು ಎಂದು ಮೂಲಗಳು ತಿಳಿಸಿವೆ. ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕರ್ನಾಟಕದಿಂದ ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ. ಕೆಲವು ದಶಕಗಳ ಹಿಂದೆ ಪ್ರೊಬೇಷನರಿ ಅಧಿಕಾರಿಯಾಗಿ ಚಿಕ್ಕೋಡಿಯಲ್ಲಿ ಕೆಲಸ ಮಾಡಿದ ಅವರು ತಾತ ಮತ್ತು ಅಜ್ಜಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು ಆದರೆ, ಅವರು ಕರ್ನಾಟಕದಿಂದ ಸ್ಪರ್ಧಿಸಲು ಉತ್ಸುಕರಾಗಿಲ್ಲ ಎಂದು ಹೇಳಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap