ಮೊದಲ ಸಚಿವ ಸಂಪುಟ ಸಭೆ: 100 ದಿನಗಳ ಕಾರ್ಯಸೂಚಿ ಪ್ರಸ್ತಾಪ ಸಾಧ್ಯತೆ

ವದೆಹಲಿ

     ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆ ಇಂದು ಸಂಜೆ 5 ಗಂಟೆಗೆ ಆಯೋಜಿಸಲಾಗಿದ್ದು, ಎಲ್ಲಾ ನೂತನ ಸಚಿವರು ಸಂಪುಟ ಸಭೆಯಲ್ಲಿ ಭಾಗಿಯಾಗಲಿದ್ದಾರೆ.ಸಚಿವ ಸಂಪುಟ ಸಭೆಯಲ್ಲಿ ಮೊದಲ 100 ದಿನಗಳ ಕಾರ್ಯಾಸೂಚಿಯನ್ನು ಪ್ರಸ್ತಾವಿಸಿ ಅಂಗೀಕರಿಸುವ ಸಾಧ್ಯತೆ ಇದೆ.

    ಇದೇ ವೇಳೆ ಸಂಪುಟ ಸದಸ್ಯರಿಗೆ ತಮ್ಮ ತಮ್ಮ ಕೆಲಸ ಬಗ್ಗೆ ಸೂಚನೆ ನೀಡುವ ಸಾಧ್ಯತೆ ಇದೆ. ಇನ್ನೂ ಇದೇ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಅವರು ಹೊಸ ಸಂಪುಟ ಸದಸ್ಯರಿಗೆ ಔತಣಕೂಟ ಏರ್ಪಡಿಸಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ 293 ಸ್ಥಾನ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವ ಅವಕಾಶ ಪಡೆದಿದ್ದ ಬಿಜೆಪಿ ನೇತೃತ್ವದ ಎನ್‌ ಡಿಎ ಮೈತ್ರಿಕೂಟ ಅಸ್ತಿತ್ವಕ್ಕೆ ಬಂದಿದ್ದು, ನೂತನ ಸರ್ಕಾರದ ನಾಯಕರಾಗಿರುವ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

   ಮೊದಲ ಹಂತದಲ್ಲಿ 24 ರಾಜ್ಯಗಳ 72 ಜನರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಪುಟದಲ್ಲಿ ಏಳು ಮಾಜಿ ಮುಖ್ಯಮಂತ್ರಿಗಳು, ಏಳು ಮಹಿಳೆಯರು, 33 ಹೊಸ ಮುಖಗಳಿಗೆ ಮನ್ನಣೆ ನೀಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link