ಅಂತರರಾಷ್ಟ್ರೀಯ ಕೃಷಿ ಅರ್ಥಶಾಸ್ತ್ರಜ್ಞರ ಸಮ್ಮೇಳನ : 75 ದೇಶದ 1000 ಪ್ರತಿನಿಧಿಗಳು ಭಾಗಿ

ದೆಹಲಿ

     ಪ್ರಧಾನಿ ಮೋದಿ ಅವರು ಇಂದು ದೆಹಲಿಯಲ್ಲಿ 32ನೇ ಅಂತರರಾಷ್ಟ್ರೀಯ ಕೃಷಿ ಅರ್ಥಶಾಸ್ತ್ರಜ್ಞರ ಸಮ್ಮೇಳನವನ್ನು ಉದ್ಘಾಟಿಸಿದರು. ಆಗಸ್ಟ್ 2 ರಿಂದ 7ವರೆಗೆ ಇಂಟರ್ನ್ಯಾಷನಲ್ ಅಸೋಸಿಯೇಷನ್ ​​ಆಫ್ ಅಗ್ರಿಕಲ್ಚರಲ್ ಎಕನಾಮಿಸ್ಟ್ಸ್ ತ್ರೈವಾರ್ಷಿಕ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದಾರೆ.

    ಇಂಟರ್ನ್ಯಾಷನಲ್ ಅಸೋಸಿಯೇಷನ್ ​​ಆಫ್ ಅಗ್ರಿಕಲ್ಚರಲ್ ಎಕನಾಮಿಸ್ಟ್ಸ್ ಆಯೋಜಿಸಿರುವ ಈ ಆರು ದಿನಗಳ ಸಮ್ಮೇಳನದಲ್ಲಿ ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಬಗ್ಗೆ ಚರ್ಚೆ ನಡೆಯಲಿದೆ. ಒಟ್ಟು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನಮ್ಮ ಹವಮಾನದ ಬಗ್ಗೆಯೂ ಈ ಕಾರ್ಯಕ್ರಮದಲ್ಲಿ ಚರ್ಚೆಯಾಗಬೇಕಿದೆ. ಹಾಗೂ ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳನ್ನು ಎದುರಿಸುವ ಮತ್ತು ಸುಸ್ಥಿರ ಕೃಷಿಯ ಅಗತ್ಯಗಳನ್ನು ನಿಭಾಯಿಸುವ ಬಗ್ಗೆ ಈ ಸಮ್ಮೇಳದಲ್ಲಿ ಚರ್ಚಿಸಬೇಕಾಗಿದೆ.
    ಸಮ್ಮೇಳನವು ಜಾಗತಿಕ ಕೃಷಿಕರು ಅನುಭವಿಸುತ್ತಿರುವ ಸವಾಲುಗಳ ಬಗ್ಗೆ ಭಾರತದ ಕೃಷಿಗಳು ಹೇಗೆ ಸಹಾಯವಾಗಿದೆ ಹಾಗೂ ಪೂರಕವಾಗುವ ವಿಧಾನಗಳ ಬಗ್ಗೆ ತಿಳಿಸಲಿದ್ದಾರೆ. ICAE 2024 ಯುವ ಸಂಶೋಧಕರು ಮತ್ತು ಪ್ರಮುಖ ವೃತ್ತಿಪರಿಗೆ ಈ ವೇದಿಕೆ ತುಂಬಾ ಸಹಾಯವಾಗಲಿದೆ. ಸಂಶೋಧನಾ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ. ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ನೀತಿ ರಚನೆ ಪರಿಣಾಮ ಏನು ಎಂಬ ಬಗ್ಗೆ ಇಲ್ಲಿ ತಿಳಿಸಲಾಗುತ್ತದೆ.

Recent Articles

spot_img

Related Stories

Share via
Copy link
Powered by Social Snap