1000 ರೂ ಗೌರವ ಧನ ಹೆಚ್ಚಳಕ್ಕೆ ಪ್ರಸ್ತಾಪ ಸಲ್ಲಿಸಲಾಗಿದೆ : ವಿ.ಸುನೀಲ್ ಕುಮಾರ್

ಬೆಂಗಳೂರು

    ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಅಡುಗೆ ತಯಾರಿಕಾ ಸಿಬ್ಬಂದಿ ಗೌರವಧನ ಹೆಚ್ಛಳ ಮಾಡಲು ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ವಿಧಾನಸಭೆಯಲ್ಲಿಂದು ಭರವಸೆ ನೀಡಿದರು.

    ಪ್ರಶ್ನೋತ್ತರ ವೇಳೆಯಲ್ಲಿ ಶಿಕ್ಷಣ ಸಚಿವರ ಪರವಾಗಿ ಉತ್ತರಿಸಿದ ಸಚಿವರು, ಅಡುಗೆ ತಯಾರಿಕಾ ಸಿಬ್ಬಂದಿ ಪೈಕಿ ಮುಖ್ಯ ಅಡುಗೆಯವರಿಗೆ 2 ಸಾವಿರದ 700 ರೂಪಾಯಿಯಿಂದ 3 ಸಾವಿರದ 700 ರೂಪಾಯಿಗೆ ಗೌರವಧನ ಹೆಚ್ಚಿಸಲಾಗಿದೆ. ಬಜೆಟ್‌ನಲ್ಲಿ ಒಂದು ಸಾವಿರ ರೂಪಾಯಿ ಹೆಚ್ಚಳ ಮಾಡಲು ಪ್ರಸ್ತಾಪಿಸಲಾಗಿದೆ ಎಂದರು.

    25 ವಿದ್ಯಾರ್ಥಿಗಳಿಗಿಂತ ಕಡಿಮೆ ಇರುವ ಶಾಲೆಗಳಲ್ಲೂ ಅಡುಗೆ ಸಿಬ್ಬಂದಿ ನೇಮಕ ಸಂಬಂಧ ಶಿಕ್ಷಣ ಸಚಿವರ ಗಮನಕ್ಕೆ ತಂದು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap