ಗಂಜಾಂ
ಒಡಿಶಾದ ಗಂಜಾಂನಲ್ಲಿ ಒಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪರಿಣಾಮ 10 ಜನ ಪ್ರಯಾಣಿಕರು ಸಾವನ್ನಪ್ಪಿರುವ ದುರ್ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಗಂಜಾಂ ಜಿಲ್ಲೆಯ ದಿಗ್ಪಹಂಡಿಯ ಡೆಂಗೋಸ್ಟಾ ಪ್ರದೇಶದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಹಲವು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಬ್ರಹ್ಮಪುರದ ಎಂಕೆಸಿಜೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಡರಾತ್ರಿ 1 ಗಂಟೆ ಸಮಯದಲ್ಲಿ ದಿಗ್ಪಹಂಡಿಯ ಗ್ರಾಮದ ಡೆಂಗೋಸ್ಟಾ ಎಂಬಲ್ಲಿ ಒಎಸ್‌ಆರ್‌ಟಿಸಿ ಬಸ್ ಮತ್ತು ಬೆರ್ಹಾಮ್‌ಪುರ ಪ್ರದೇಶದ ಖಂಡೇಲಿ ಗ್ರಾಮದಲ್ಲಿ ಮದುವೆ ಸಮಾರಂಭ ಮುಗಿಸಿ ಹಿಂದಿರುಗಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮೃತಪಟ್ಟ 10 ಮಂದಿ ಖಾಸಗಿ ಬಸ್‌ನಲ್ಲಿದ್ದವರು. ಅಲ್ಲದೇ, ಓರ್ವ ಬಸ್ ಚಾಲಕ ಸೇರಿ ಹಲವರು ಘಟನೆಯಲ್ಲಿ ಗಾಯಗೊಂಡಿದ್ದಾರೆ. ಮತ್ತೊಬ್ಬ ಬಸ್ ಚಾಲಕ ಘಟನಾ ಸ್ಥಳದಿಂದ ಪರಾರಿಗಯಾಗಿದ್ದಾನೆ. ಘಟನೆಯ ತನಿಖೆ ಮುಂದುವರಿದಿದೆ ಎಂದು ಬ್ರಹ್ಮಪುರದ ಪೊಲೀಸ್ ವರಿಷ್ಠಾಧಿಕಾರಿ ಡಾ.ಶ್ರವಣ್ ವಿವೇಕ್ ಎಂ ಅವರು ಹೇಳಿದ್ದಾರೆ.