ರಾಜ್‍ಕೋಟ್:
ಗುಜರಾತ್‍ನ ಗಿರ್ ಅರಣ್ಯ ಪ್ರದೇಶದಲ್ಲಿ ಸಿಂಹಗಳ ಕಾದಾಟದಲ್ಲಿ ಸುಮಾರು 11 ಸಿಂಹಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಿರ್ ಅರಣ್ಯ ಪ್ರದೇಶದಲ್ಲಿ ಸಿಂಹಗಳ ಕಾದಾಟ ಸಾಮಾನ್ಯವಾಗಿದ್ದು, ಇದೀಗ ಈ ಕ್ರೂರ ಕಾದಾಟಕ್ಕೆ ಸುಮಾರು 11 ಸಿಂಹಗಳು ಮೃತಪಟ್ಟಿವೆ ಎನ್ನಲಾಗಿದೆ. ದಲ್ಖಾನಿಯಾ ರೇಂಜ್‍ನಲ್ಲಿ ಅತಿ ಹೆಚ್ಚಾಗಿ ಸಿಂಹಗಳು ಸತ್ತು ಬಿದ್ದಿರುವುದು ಕಂಡು ಬಂದಿದೆ ಎಂದು ತಿಳಿದು ಬಂದಿದೆ. ಇಲ್ಲಿ ಎರಡು ದಿನಗಳ ಹಿಂದಷ್ಟೇ 7 ಸಿಂಹಗಳ ಶವ ಪತ್ತೆಯಾಗಿತ್ತು. ಇದೀಗ ಇದೇ ಪ್ರದೇಶದಲ್ಲಿ ಮತ್ತೆ 4 ಸಿಂಹಗಳ ಶವ ಪತ್ತೆಯಾಗಿದೆ.
ಸಿಂಹಗಳ ಶವವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದ್ದು. ಈ ಹಿಂದೆ ಮೃತಪಟ್ಟ ಸಿಂಹಗಳ ಮರಣೋತ್ತರ ಪರೀಕ್ಷೆಯಲ್ಲಿ ಸಿಂಹಗಳ ಸಾವಿಗೆ ಕಾದಾಟದಿಂದ ಆದ ಗಾಯಗಳೇ ಕಾರಣ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದರು.
ಮೇಲ್ನೋಟಕ್ಕೆ ಇದು ಕೂಡ ಕಾದಾಟದಿಂದ ಸಂಭವಿಸಿದ ಸಾವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಸಿಂಹಗಳ ಸಾವಿನ ಕುರಿತಂತೆ ಗುಜರಾತ್ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ.