ರಾಮೇಶ್ವರಂ ಕೆಫೆ ಪ್ರಕರಣ : 11 ಮಂದಿ NIA ವಶಕ್ಕೆ ….!

ಹುಬ್ಬಳ್ಳಿ: 

   ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ  ಅಧಿಕಾರಿಗಳು ಹುಬ್ಬಳ್ಳಿ ಇಬ್ಬರು ಸಹೋದರರು ಸೇರಿದಂತೆ ಒಟ್ಟು 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

    ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ  ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತನಿಖೆ ಚುರುಕುಗೊಳಿಸಿದ್ದು, ಮಂಗಳವಾರ ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.

     ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಭಾಗಿಯಾಗಿರುವ ಇತರ ಸಂಚುಕೋರರನ್ನು ಪತ್ತೆ ಮಾಡಲು ರಾಷ್ಟ್ರೀಯ ತನಿಖಾ ದಳವು ನಾಲ್ಕು ರಾಜ್ಯಗಳ 11 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದೆ. ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಇಂದು ಪತ್ತೆಯಾದ 11 ಮಂದಿ ಶಂಕಿತರಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ 2012ರ ಲಷ್ಕರ್–ಎ–ತಯ್ಬಾ (ಎಲ್‌ಇಟಿ) ಪಿತೂರಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಗಳೂ ಸೇರಿದ್ದಾರೆ. ದಾಳಿ ವೇಳೆ ಡಿಜಿಟಲ್ ಪರಿಕರಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap