111 ಪಾಕ್ ಪ್ರಜೆಗಳು ಎರಡು ದಿನಗಳಲ್ಲಿ ಭಾರತ ತೊರೆಯುವಂತೆ ಸೂಚನೆ!

ಪುಣೆ: 

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ವಾಸಿಸುತ್ತಿರುವ 111 ಪಾಕಿಸ್ತಾನಿ ಪ್ರಜೆಗಳಿಗೆ ಏ. 27 ರೊಳಗೆ ಭಾರತವನ್ನು ತೊರೆಯುವಂತೆ ಜಿಲ್ಲಾಡಳಿತ ಸೂಚಿಸಿದೆ.ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕ್ ನಾಗರಿಕರಿಗೆ ನೀಡಲಾದ ಎಲ್ಲಾ ರೀತಿಯ ವೀಸಾಗಳನ್ನು ಅಮಾನತುಗೊಳಿಸಿದ ನಂತರ ಈ ಕ್ರಮ ಕೈಗೊಂಡಿದೆ.ಆದರೆ ವೈದ್ಯಕೀಯ ವೀಸಾಗಳು ಹೆಚ್ಚುವರಿಯಾಗಿ ಎರಡು ದಿನಗಳವರೆಗೆ ಮಾನ್ಯವಾಗಿರುತ್ತವೆ. ವೀಸಾ ನೀಡುವ ಕೇಂದ್ರಗಳು ಮತ್ತು ಪಾಸ್‌ಪೋರ್ಟ್ ಕಚೇರಿಯಿಂದ ಪಾಕಿಸ್ತಾನಿ ಪ್ರಜೆಗಳ ಡೇಟಾವನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿತೇಂದ್ರ ದುಡಿ ಸುದ್ದಿಗಾರರಿಗೆ ತಿಳಿಸಿದರು. ಈ ಮಧ್ಯೆ ಛತ್ರಪತಿ ಸಂಭಾಜಿನಗರದ ಪೊಲೀಸರು 57 ಪಾಕಿಸ್ತಾನಿ ಪ್ರಜೆಗಳು ದೀರ್ಘಾವಧಿಯ ವೀಸಾದಲ್ಲಿ ನಗರದಲ್ಲಿದ್ದಾರೆ. ಈ ಪ್ರಕರಣದಲ್ಲಿ ಹೆಚ್ಚಿನ ಸೂಚನೆಗಳಿಗಾಗಿ ಜಿಲ್ಲಾಧಿಕಾರಿ ಕಚೇರಿ ಕಾಯುತ್ತಿರುವುದಾಗಿ ಜಿಲ್ಲಾ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.