ದ.ಆಫ್ರಿಕಾದಿಂದ ಭಾರತಕ್ಕೆ 12 ಹೊಸ ಅತಿಥಿಗಳ ಆಗಮನ..

ಗ್ವಾಲಿಯರ್:

     ದೂರದ  ದಕ್ಷಿಣ ಆಫ್ರಿಕಾದಿಂದ  12 ಚಿರತೆಗಳು ಭಾರತಕ್ಕೆ ಬಂದಿವೆ. ಭಾರತೀಯ ವಾಯು ಪಡೆಯ ಕಾರ್ಗೊ ವಿಮಾನ C-17 Globemaster  ಈ ಚಿರತೆಗಳು ಬಂದಿವೆ  . ಇಲ್ಲಿಂದ ಈ ಚಿರತೆಗಳನ್ನು ಹೆಲಿಕಾಪ್ಟರ್ ಮೂಲಕ ಕುನೊಗೆ ಕರೆದೊಯ್ಯಲಾಗುತ್ತದೆ. 

     ಅಲ್ಲಿ ಕೆಲ ದಿನಗಳ ಕಾಲ  ಕುನೊವಿನಲ್ಲಿ ಇರಿಸಿ ನಂತರ ಇಲ್ಲಿನ ಪರಿಸರಕ್ಕೆ ಹೊಂದಿಕೊಂಡ ನಂತರ ಬಯಲು ಅರಣ್ಯಕ್ಕೆ ಬಿಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುನೊ ತಲುಪಿದ ನಂತರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೇ ಈ ಚಿರತೆಗಳನ್ನು ಸ್ವಾಗತಿಸಿ ಆವರಣದಲ್ಲಿ ಬಿಡುತ್ತಾರೆ.

     ಚೀತಾ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳ ಪ್ರಕಾರ, ದಕ್ಷಿಣ ಆಫ್ರಿಕಾದಿಂದ ತರಲಾಗುತ್ತಿರುವ ಈ ಚಿರತೆಗಳಲ್ಲಿ ಏಳು ಗಂಡು ಮತ್ತು ಐದು ಹೆಣ್ಣು ಚಿರತೆಗಳು ಸೇರಿವೆ. ಮೊದಲು ಸೆಪ್ಟೆಂಬರ್ 2020ರಲ್ಲಿ, ನಮೀಬಿಯಾದಿಂದ ಎಂಟು ಚಿರತೆಗಳನ್ನು ತರಲಾಗಿತ್ತು. ಈ ಚಿರತೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಸಂದರ್ಭದಲ್ಲಿ ಸೆಪ್ಟೆಂಬರ್ 17 ರಂದು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆ ಮಾಡಿದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap