ನವದೆಹಲಿ :
ನಿಧಾನಗತಿಯ ಬೌಲಿಂಗ್ ಕಾರಣಕ್ಕೆ ಕೊಹ್ಲಿಗೆ ದಂಡ ವಿಧಿಸಲಾಗಿದೆ. ಕೊಹ್ಲಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 2020 ರ ಆವೃತ್ತಿಯಲ್ಲಿ ನಿನ್ನೆ ನಡೆದ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿರುವುದಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿಗೆ 12 ಲಕ್ಷ ರೂ. ದಂಡ ಹೇರಲಾಗಿದೆ.
ಐಪಿಎಲ್ ನಿಯಮಗಳ ಪ್ರಕಾರ, ಟಿ20 ಕ್ರಿಕೆಟ್ ನಲ್ಲಿ ಫೀಲ್ಡಿಂಗ್ ಮಾಡುವ ತಂಡಕ್ಕೆ 75 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ನಿಗಧಿತ ಕಾಲಾವಧಿಯೊಳಗೆ 20 ಓವರ್ ಗಳನ್ನು ತಂಡದ ನಾಯಕ ಮುಗಿಸಬೇಕಾಗುತ್ತದೆ. ಅವಧಿಯೊಳಗೆ ಓವರ್ ಮುಕ್ತಾಯ ಮಾಡದಿದ್ದರೆ ಪಂದ್ಯದ ರೆಫ್ರಿ ನಾಯಕನಿಗೆ ದಂಡವನ್ನು ವಿಧಿಸುತ್ತಾರೆ. ಹಾಗಾಗಿ ಕೊಹ್ಲಿಗೆ ದಂಡ ವಿಧಿಸಲಾಗಿದೆ. ಇದೇ ತಪ್ಪು ಪುನಾವರ್ತನೆಗೊಂಡಲ್ಲಿ ನಾಯಕಯನನ್ನು ಅಮಾನತುಗೊಳಿಸಲಾಗುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ