ಚಿಕ್ಕಮಗಳೂರು:
ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡುವಂತೆ ಮತದಾರರಿಗೆ ಮನವಿ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಕಾಂಗ್ರೆಸ್ 120 ಸ್ಥಾನಗಳನ್ನು ಗೆದ್ದರೂ ಸಾಕಾಗುವುದಿಲ್ಲ. ಏಕೆಂದರೆ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಅಪಾಯವಿದೆ ಎಂದಿದ್ದಾರೆ.
ರಾಜ್ಯದಲ್ಲಿ ಸರ್ಕಾರ ರಚಿಸಲು ನಮಗೆ 113 ಸ್ಥಾನಗಳ ಅಗತ್ಯವಿದ್ದರೂ, ಕಾಂಗ್ರೆಸ್ 120 ಸ್ಥಾನಗಳು ಗೆದ್ದರೂ ಸಾಕಾಗುವುದಿಲ್ಲ. ಏಕೆಂದರೆ ಅವರು ನಮ್ಮ ಶಾಸಕರನ್ನು ಖರೀದಿಸುತ್ತಾರೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ತಕ್ಷಣ ಅದರ ಎಲ್ಲ ‘ಖಾತರಿ’ಗಳಿಗೆ ಮೊದಲ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗುವುದು ಎಂದು ಖರ್ಗೆ ಭರವಸೆ ನೀಡಿದರು.
“ನಾವು ಅಧಿಕಾರಕ್ಕೆ ಬಂದರೆ ‘ಗೃಹ ಜ್ಯೋತಿ’ಯನ್ನು ಜಾರಿಗೆ ತರುತ್ತೇವೆ. ಅದರ ಅಡಿಯಲ್ಲಿ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು; ‘ಗೃಹ ಲಕ್ಷ್ಮಿ’ ಅಡಿಯಲ್ಲಿ ಪ್ರತಿ ಮಹಿಳೆ ಕುಟುಂಬದ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ. ‘ಯುವ ನಿಧಿ’ ಅಡಿಯಲ್ಲಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ. ಮತ್ತು ನಿರುದ್ಯೋಗಿ ಡಿಪ್ಲೋಮಾದಾರರಿಗೆ ಮಾಸಿಕ 1,500 ರೂ. ಮತ್ತು ಬಿಪಿಎಲ್ ಕುಟುಂಬಗಳಿಗೆ ಪ್ರತಿ ವ್ಯಕ್ತಿಗೆ ತಿಂಗಳಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವ ‘ಅನ್ನ ಭಾಗ್ಯ’ ಯೋಜನೆ ಜಾರಿಗೊಳಿಸುತ್ತೇವೆ ” ಎಂದು ಎಐಸಿಸಿ ಅಧ್ಯಕ್ಷರು ಹೇಳಿದರು.