ರಾಜ್‌ ಗಢ : ಟ್ರ್ಯಾಕ್ಟರ್‌ ಪಲ್ಟಿ : 13 ಸಾವು…!

ರಾಜ್ ಗಢ: 

   ಮಧ್ಯಪ್ರದೇಶದ ರಾಜ್‌ಗಢದಲ್ಲಿ ತಡರಾತ್ರಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ. ರಾಜ್‌ಗಢ್‌ನ ಪಿಪ್ಲೋಡಿಯಲ್ಲಿ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಮದುವೆ ಮೆರವಣಿಗೆ ವೇಳೆಯಲ್ಲಿ ನಡೆದ ಘಟನೆಯಲ್ಲಿ ಒಟ್ಟು 15 ಜನರು ಗಾಯಗೊಂಡಿದ್ದಾರೆ.

   ಮೆರವಣಿಗೆ ರಾಜಸ್ಥಾನದ ಮೋತಿಪುರದಿಂದ ಕುಲಂಪುರಕ್ಕೆ ತೆರಳುತ್ತಿತ್ತು ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ರಾಜ್‌ಗಢ ಜಿಲ್ಲಾಧಿಕಾರಿ ಹರ್ಷ್ ದೀಕ್ಷಿತ್, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಚಿವ ನಾರಾಯಣ್ ಸಿಂಗ್ ಪನ್ವಾರ್ ಸ್ಥಳಕ್ಕೆ ಭೇಟಿ ನೀಡಿದ್ದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

   ” ರಾಜಸ್ಥಾನ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಅಲ್ಲಿನ ಪೊಲೀಸರು ಕೂಡ ಸ್ಥಳಕ್ಕೆ ತಲುಪಿದ್ದಾರೆ. ರಾಜ್‌ಗಢದ ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ರೋಗಿಗಳನ್ನು ಭೋಪಾಲ್‌ಗೆ ಸ್ಥಳಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಅನೇಕ ಜನರ ಸಾವಿನ ಸುದ್ದಿ ತುಂಬಾ ದುಃಖಕರವಾಗಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap