14ನೇ ವಾರ್ಡ್ ಪಕ್ಷೇತರ ಅಭ್ಯರ್ಥಿಗೆ ಬೆಂಬಲ; ಬಂಡಾಯ ಅಭ್ಯರ್ಥಿಗಳ ವಿರುದ್ದ ಕ್ರಮ;ಫಾತ್ಯರಾಜನ್

ಚಿತ್ರದುರ್ಗ:

            ನಗರಸಭೆ ಚುನಾವಣೆಯಲ್ಲಿ 35 ವಾರ್ಡ್‍ಗಳಿಂದ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಪಕ್ಷದ ಬಿ.ಫಾರಂ ಪಡೆದು ಸ್ಪರ್ಧಿಸಿರುವವರ ವಿರುದ್ದ ಕೆಲವು ಆಫೀಸ್ ಬೇರರ್ಸ್ ಮತ್ತು ಕಾರ್ಯಕರ್ತರು ಸ್ಪರ್ಧಿಸಿದ್ದಾರೆ. ಇನ್ನು ಎರಡು ದಿನದೊಳಗೆ ಕಣದಿಂದ ಹಿಂದಕ್ಕೆ ಸರಿದು ಪಕ್ಷದ ಅಧಿಕೃತ ಅಭ್ಯರ್ಥಿಗೆ ಬೆಂಬಲ ಸೂಚಿಸಬೇಕು. ಇಲ್ಲವಾದಲ್ಲಿ ಪಕ್ಷದಿಂದ ಶಿಸ್ತು ಕ್ರಮ ಕೈಗೊಂಡು ಉಚ್ಚಾಟಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್ ಎಚ್ಚರಿಸಿದರು.

            ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಹನುಮಲಿ ಷಣ್ಮುಖಪ್ಪನವರ ನಿವಾಸದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಜಯಂತಿ ಕೋಂ ಹೆಚ್.ಎನ್.ಮಂಜುನಾಥಗೊಪ್ಪೆ, ನಳಿನ ಕೋಂ ಮರುಳಾರಾಧ್ಯ ಇವರುಗಳಿಗೆ ಪಕ್ಷದಿಂದ ಬಿ.ಫಾರಂ ನೀಡುವ ಸಂಬಂಧ ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷ ಈಶ್ವರಖಂಡ್ರೆ ಇವರ ಜೊತೆ ರಾಜಧಾನಿಯಲ್ಲಿ ಚರ್ಚಿಸಿದಂತೆ ಜಯಂತಿಗೆ ಹದಿನಾಲ್ಕನೇ ವಾರ್ಡ್‍ನಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಬಿ.ಫಾರಂ ನೀಡಿದ್ದರು. ನಾಮಪತ್ರ ಹಿಂತೆಗೆಯಲು ಕೊನೆ ದಿನದಂದು ಹೆಚ್.ಎನ್.ಮಂಜುನಾಥಗೊಪ್ಪೆ ತಮ್ಮ ಪತ್ನಿಯ ನಾಮಪತ್ರವನ್ನು ಹಿಂದಕ್ಕೆ ತೆಗೆಸಿ ಅದೇ ವಾರ್ಡ್‍ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದರಿಂದ ದಂಪತಿಗಳಿಬ್ಬರಿಗೂ ಸಮಜಾಯಿಷಿ ಕೇಳಿ ನೋಟಿಸ್ ನೀಡಲಾಗಿದೆ. ಅದೇ ರೀತಿ 35 ವಾರ್ಡ್‍ಗಳಲ್ಲಿ ಯಾರಾದರೂ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ದ ಬಂಡಾಯವಾಗಿ ಸ್ಪರ್ಧಿಸಿದರೆ ತಕ್ಷಣ ಹಿಂದಕ್ಕೆ ಸರಿದು ಪಕ್ಷದ ಅಭ್ಯರ್ಥಿಗೆ ಬೆಂಬಲಿಸಬೇಕು ಎಂದು ಸೂಚಿಸಿದರು.

               ಜಯಂತಿಯವರು ನಾಮಪತ್ರ ಹಿಂದಕ್ಕೆ ಪಡೆದಿರುವುದರಿಂದ ಹದಿನಾಲ್ಕನೆ ವಾರ್ಡ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಲ್ಲದಂತಾಗುವುದು ಬೇಡ ಎಂದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಸ್.ಆರ್.ಅರುಣ್‍ಕುಮಾರ್‍ರವರನ್ನು ಗೆಲ್ಲಿಸಿಕೊಳ್ಳಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.

                ಹನುಮಲಿ ಷಣ್ಮುಖಪ್ಪ ಮಾತನಾಡುತ್ತ ಹದಿನಾಲ್ಕನೆ ವಾರ್ಡ್‍ನಿಂದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಯಂತಿಯವರ ನಾಮಪತ್ರವನ್ನು ಅವರ ಪತಿ ಹೆಚ್.ಎನ್.ಮಂಜುನಾಥಗೊಪ್ಪೆ ಹಿಂದಕ್ಕೆ ಪಡೆಯುವಂತೆ ಮಾಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿರುವುದಲ್ಲದೆ ಹದಿನಾಲ್ಕನೆ ವಾರ್ಡ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲದಂತೆ ಮಾಡಿರುವುದರಿಂದ ಪಕ್ಷದ ಮರ್ಯಾದೆ ಉಳಿಸಿಕೊಳ್ಳುವುದಕ್ಕಾಗಿ ಎಸ್.ಆರ್.ಅರುಣ್‍ಕುಮಾರ್ ಇವರಿಗೆ ಕಾಂಗ್ರೆಸ್‍ನಿಂದ ಬೆಂಬಲ ನೀಡುತ್ತಿದ್ದೇವೆ ಎಂದರು.
ಡಿ.ಎನ್.ಮೈಲಾರಪ್ಪ, ಸೈಯದ್‍ಅಲ್ಲಾಭಕ್ಷ್, ಮಹಡಿಶಿವಮೂರ್ತಿ, ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ನಾಗರಾಜ್‍ರೆಡ್ಡಿ, ಎ.ಕಬುಲಾಹುಸೇನ್, ಅಭ್ಯರ್ಥಿ ಶ್ರೀರಾಂ ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

Recent Articles

spot_img

Related Stories

Share via
Copy link