ಮೈಸೂರು:
ಭ್ರೂಣ ಪತ್ತೆ, ಹತ್ಯೆ ಪ್ರಕರಣ ಸಂಬಂಧ ಕಾರ್ಯಾಚರಣೆ ಮುಂದುವರಿದಿದ್ದು ಮೈಸೂರಿನಲ್ಲಿ) ವೈದ್ಯಕೀಯ ಪ್ರಮಾಣಪತ್ರ ಇಲ್ಲದ 14 ಕ್ಲಿನಿಕ್ಗಳಿಗೆ ಬೀಗ ಹಾಕಲಾಗಿದೆ. ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ಮುಂದುವರೆದಿದೆ.
ಜಿಲ್ಲಾ ಟಾಸ್ಕ್ಫೋರ್ಸ್ ತಂಡ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಜಿಲ್ಲೆಯಲ್ಲಿನ ನರ್ಸಿಂಗ್ ಹೋಂ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದ್ದು ಸೂಕ್ತ ದಾಖಲಾತಿ ಇಲ್ಲದ ಕ್ಲಿನಿಕ್ಗಳಿಗೆ ಅಧಿಕಾರಿಗಳು ನೋಟಿಸ್ ಕಳಿಸುತ್ತಿದ್ದಾರೆ.
ಈ ಮಧ್ಯೆ ಮೊನ್ನೆ ತಿರುಮಲಶೆಟ್ಟಿಹಳ್ಳಿಯ ಎಸ್ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಮಾಡಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. 16 ವಾರದ ಹೆಣ್ಣು ಭ್ರೂಣವನ್ನ ಹತ್ಯೆ ಮಾಡಿ, ಕಸದ ರೀತಿ ಡಸ್ಟ್ಬಿನ್ಗೆ ಹಾಕಲಾಗಿತ್ತು. ಮಾಹಿತಿ ಪಡೆದು ಆಸ್ಪತ್ರೆಗೆ ದಾಳಿ ಮಾಡಿದ್ದ ಆರೋಗ್ಯ ಅಧಿಕಾರಿಗಳ ತಂಡ, ಆಸ್ಪತ್ರೆ ವಿರುದ್ಧ ಕೇಸ್ ದಾಖಲಿಸಿದೆ. ಆಸ್ಪತ್ರೆ ಸೀಜ್ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಇದ್ದ ರೋಗಿಗಳನ್ನ ಬೇರೆ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇನ್ನು ಭ್ರೂಣ ಹತ್ಯೆ ಪ್ರಕರಣ ಬಯಲಾಗ್ತಿದ್ದಂತೆ ವೈದ್ಯ ಶ್ರೀನಿವಾಸ್ ಎಸ್ಕೇಪ್ ಆಗಿದ್ದಾನೆ.
ಆಸ್ಪತ್ರೆಗೆ ದಾಳಿ ಮಾಡಿದ್ದ ಅಧಿಕಾರಿಗಳು ಒಬ್ಬ ಗರ್ಭಿಣಿ ಸೇರಿದಂತೆ ಆಸ್ಪತ್ರೆಯ 7 ಸಿಬ್ಬಂದಿಯನ್ನ ವಶಕ್ಕೆ ಪಡೆಯಲಾಗಿದೆ. ಇವ್ರೆಲ್ಲ ಐದರಿಂದ 10 ಸಾವಿರ ರೂಪಾಯಿ ಸಂಬಳಕ್ಕೆ ಕೆಲಸ ಮಾಡ್ತಿದ್ರು ಅನ್ನೋದು ಗೊತ್ತಾಗಿದೆ. ಇದೀಗ ಇವ್ರನ್ನ ಪೊಲೀಸರು ಪ್ರತ್ಯೇಕವಾಗಿ ವಿಚಾರಣೆ ನಡೆಸಲಿದ್ದಾರೆ.
ಅಷ್ಟಕ್ಕೂ ಆಸ್ಪತ್ರೆಯ ಸ್ಕ್ಯಾನಿಂಗ್ ದಾಖಲೆಗಳು ಸಾಕಷ್ಟು ಅನುಮಾನ ಮೂಡಿಸಿವೆ. ಯಾಕಂದ್ರೆ, ಕಳೆದ ಒಂದು ವರ್ಷದಲ್ಲಿ ಆಸ್ಪತ್ರೆಯ 1500 ಕ್ಕೂ ಅಧಿಕ ಮಹಿಳೆಯರಿಗೆ ಸ್ಕ್ಯಾನಿಂಗ್ ಮಾಡಲಾಗಿದೆ. 1500 ಕ್ಕೂ ಅಧಿಕ ಮಹಿಳೆಯರಲ್ಲಿ 400 ಕ್ಕೂ ಅಧಿಕ ಮಹಿಳೆಯರ ಹೆರಿಗೆ ಆಗಿರುವ ಮಾಹಿತಿ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ