ಗುಜರಾತ್‌ : ದೋಣಿ ಮುಳುಗಿ 16 ಸಾವು……!

ಅಹಮದಾಬಾದ್:

      ವಡೋದರಾದ ಹರಣಿ ಸರೋವರದಲ್ಲಿ ದೋಣಿ ಮುಳುಗಿ 14 ಶಾಲಾ ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ಒಟ್ಟು 14 ಜನ ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ನಡೆದಿದೆ.

     ದೋಣಿಯಲ್ಲಿ ನ್ಯೂ ಸನ್‌ರೈಸ್ ಶಾಲೆಯ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಮತ್ತು ಅವರಲ್ಲಿ ಯಾರೂ ಲೈಫ್ ಜಾಕೆಟ್‌ಗಳನ್ನು ಧರಿಸಿರಲಿಲ್ಲ ಎಂದು ವರದಿಯಾಗಿದೆ.ಉಳಿದ ವಿದ್ಯಾರ್ಥಿಗಳ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 
    ದೋಣಿಯಲ್ಲಿ 27 ಮಕ್ಕಳಿದ್ದರು, ನಾವು ಇತರರನ್ನು ಪತ್ತೆಹಚ್ಚಲು ಮತ್ತು ರಕ್ಷಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ವಡೋದರಾ ಜಿಲ್ಲಾಧಿಕಾರಿ ಎಬಿ ಗೋರ್ ಅವರು ಹೇಳಿದ್ದಾರೆ.
   ಏತನ್ಮಧ್ಯೆ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ದುರಂತದ ನಂತರ ಸಂತಾಪ ಸೂಚಿಸಿದ್ದು, ಪ್ರಾಣ ಕಳೆದುಕೊಂಡ ಅಮಾಯಕ ಮಕ್ಕಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬಕ್ಕೆ ನನ್ನ ಆಳವಾದ ಸಂತಾಪಗಳು. ದೇವರು ಅವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap