ಆಳಂದ : ಲಾಡ್ಲೇ ಮಶಾಕ್ ದರ್ಗಾದ ಸುತ್ತಾ 144 ಸೆಕ್ಷನ್‌ ಜಾರಿ

ಕಲಬುರಗಿ:

     ಆಳಂದದ  ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗಕ್ಕೆ ಇಂದು ಪೂಜೆ ನಡೆಯಲಿದ್ದುಈ ಹಿನ್ನೆಲೆಯಲ್ಲಿ ದರ್ಗಾದಲ್ಲಿರುವ ಶಿವಲಿಂಗಕ್ಕೆ ಶನಿವಾರ ಸ್ವಾಮೀಜಿಗಳು, ಹಿಂದೂಪರ ಸಂಘಟನೆ ಮುಖಂಡರು ಹಾಗೂ ಜನಪ್ರತಿನಿಧಿಗಳು ಪೂಜೆ ಸಲ್ಲಿಸಲಿದ್ದಾರೆ. ಮತ್ತೊಂದಡೆ ನಾಳೆ ದರ್ಗಾದಲ್ಲಿ ಉರುಸ್ ಕೂಡಾ ಇದೆ ಇದರಿಂದ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

   ಫೆ.17 ಮಧ್ಯರಾತ್ರಿ 12 ಗಂಟೆಯಿಂದ ಫೆ.18 ರಾತ್ರಿ 12ಗಂಟೆ ವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ಗುರುಕರ್ ತಿಲಿಸಿದ್ದಾರೆ. ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವ ಉದ್ದೇಶದಿಂದ 144 ಸೆಕ್ಷನ್‌ ಜಾರಿಗೊಳಿಸಲಾಗಿದೆ ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.

     ಕಳೆದ ವರ್ಷ ಇದೇ ವಿಚಾರಕ್ಕೆ ಕಲ್ಲು ತೂರಾಟವಾಗಿ ಭಾರೀ ಹಿಂಸಾಚಾರ ನಡೆಸಿತ್ತು. ಇದರಿಂದ ಈ ಬಾರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ.​

    ಲಾಡ್ಲೇ ಮಶಾಕ್ ದರ್ಗಾದಲ್ಲಿರುವ ರಾಘವ ಚೈತನ್ಯ ಪೂಜೆಗೆ ಅವಕಾಶ ನೀಡಿದ್ದ ವಕ್ಫ್ ಟ್ರಿಬ್ಯುನಲ್ ಆದೇಶವನ್ನು ಕಲಬುರಗಿ ಹೈಕೋರ್ಟ್ ಎತ್ತಿ ಹಿಡಿದಿದೆ. ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ 15 ಜನರಿಗೆ ಅವಕಾಶ ನೀಡಿ ವಕ್ಫ್ ಟ್ರಿಬುನಲ್ ಕೋರ್ಟ್ ಆದೇಶ ಹೊರಡಿಸಿತ್ತು.

ಇದನ್ನು ಪ್ರಶ್ನಿಸಿದ ದರ್ಗಾ ಕಮೀಟಿ, ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ಆಲಿಸಿದ ಕಲಬುರಗಿ ಹೈಕೋರ್ಟ್​ ನ್ಯಾಯಮೂರ್ತಿ ಜೆ.ಎಂ.ಖಾಜಿ, ಶಿವಲಿಂಗ ಪೂಜೆಗೆ ಅವಕಾಶ ನೀಡಿ ಆದೇಶ ಹೊರಡಿಸಿದ್ದಾರೆ.

ಆಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಇಂದು ಮಧ್ಯಾಹ್ನ ಎರಡು ಗಂಟೆಯಿಂದ ಆರು ಗಂಟೆವರಗೆ ಪೂಜೆಗೆ ನ್ಯಾಯಾಲಯ ಅವಕಾಶ ನೀಡಿದೆ. ಹೀಗಾಗಿ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಕೇಂದ್ರ ಸಚಿವ ಭಗವಂತ ಖೂಬಾ, ಆಳಂದ ಶಾಸಕ ಸುಭಾಷ್ ಗುತ್ತೇದಾರ್, ರಾಜಕುಮಾರ್ ಪಾಟೀಲ್, ಬಸವರಾಜ್ ಮತ್ತಿಮೂಡ್ ಸೇರಿದಂತೆ ಹದಿನೈದು ಜನ ನಾಳಿನ ಪೂಜೆಯಲ್ಲಿ ಭಾಗಿಯಾಗಲಿದ್ದಾರೆಂದು ವರದಿಗಳು ತಿಳಿಸಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link