ಜಮ್ಮು:
ಭಾರತದ ಸೇನೆ ಜೂನ್ 16 ಮತ್ತು 24 ರಂದು ಪಿಓಕೆ ಒಳಗೆ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಒಟ್ಟು 15 ಭಯೋತ್ಪಾದಕರನ್ನು ಕೊಂದಿದೆ.ಭಾರತೀಯ ಸೇನೆಯು ಜೂನ್ 16 ಮತ್ತು 24 ರಂದು ಪಾಕಿಸ್ತಾನದ ನಿಯಂತ್ರಣದಲ್ಲಿರುವ ಪಿಒಕೆಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 15 ಪಿಎಎಫ್‌ಎಫ್ ಭಯೋತ್ಪಾದಕರನ್ನು ಹೊಡೆದುರುಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಮಂಗಳವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮಾರಾಮಾರಿ ನಡೆದಿತ್ತು. ಇದರಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.
ಜೊತೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಕಳೆದ 15 ದಿನಗಳಲ್ಲಿ 11 ಉಗ್ರರನ್ನು ಹತ್ಯೆ ಮಾಡಲಾಗಿದೆ. ಇವರಿಂದ 55 ಕೆಜಿ ಡ್ರಗ್ಸ್ ಹಾಗೂ 12 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
