ಕೆಎಸ್‌ಒಯು ವತಿಯಿಂದ 15 ದಿನಗಳ ಡಿಜಿಟಲ್‌ ಉದ್ಯೋಗ ಮೇಳ

ಮೈಸೂರು: 

       ಕೆಎಸ್‌ಒಯು ವತಿಯಿಂದ ಶನಿವಾರದಿಂದ 15 ದಿನಗಳ ಎಂಡ್ ಟು ಎಂಡ್ ಡಿಜಿಟಲ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಈ ಮೆಗಾ ವರ್ಚುವಲ್ ಉದ್ಯೋಗ ಮೇಳದಲ್ಲಿ ಸುಮಾರು 2,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು 10ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ.

     ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕೆಎಸ್‌ಒಯು ಉಪಕುಲಪತಿ ಪ್ರೊ.ಶರಣಪ್ಪ ವಿ ಹಾಲ್ಸೆ ಅವರು, ವಿಶ್ವವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಈ ಉದ್ಯೋಗ ಮೇಳ ಮುಕ್ತ ಅವಕಾಶ ನೀಡುತ್ತಿದೆ ಎಂದರು.

     ರಾಜ್ಯದಾದ್ಯಂತ ವಿದ್ಯಾರ್ಥಿಗಳು ದೂರದ ಸ್ಥಳಗಳಿಂದ ಬರುವುದು ಕಷ್ಟ. ಹೀಗಾಗಿ ವರ್ಚುವಲ್ ಮೂಲಕ ಉದ್ಯೋಗಾವಕಾಶಗಳನ್ನು ಹುಡುಕಲು ಸಹಾಯ ಮಾಡುವುದು ಇದರ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap