ಐಪಿಎಲ್‌ಗೆ 15 ವರ್ಷಗಳ ಸಂಭ್ರಮ; ವಿಶೇಷ ವಿಡಿಯೊ ನೋಡಿ

ಮುಂಬೈ: 

ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 15 ವರ್ಷಗಳ ಸಂಭ್ರಮದಲ್ಲಿದೆ. ಈ ಸಂಬಂಧ ಐಪಿಎಲ್ ಅಧಿಕೃತ ಟ್ವಿಟರ್ ಖಾತೆಯಲ್ಲಿ ಅಭಿಮಾನಿಗಳಿಗಾಗಿ ವಿಶೇಷ ವಿಡಿಯೊ ಹಂಚಿಕೊಳ್ಳಲಾಗಿದೆ.2008ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ಪಂದ್ಯದೊಂದಿಗೆ ಐಪಿಎಲ್‌ಗೆ ಚಾಲನೆ ದೊರಕಿತ್ತು.ಚೊಚ್ಚಲ ಪಂದ್ಯದಲ್ಲೇ ಕೆಕೆಆರ್‌ನ ಬ್ರೆಂಡನ್ ಮೆಕಲಮ್ ಶತಕ ಗಳಿಸುವ ಮೂಲಕ ಐಪಿಎಲ್‌ ಕಿಚ್ಚು ಹೊತ್ತಿಸಿದ್ದರು.

ರೆಕಾರ್ಡ್​; ನಾಲ್ಕೇ ದಿನದಲ್ಲಿ 29 ದಾಖಲೆ ಬರೆದ ‘ಕೆಜಿಎಫ್ ಚಾಪ್ಟರ್​ 2’

ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿ ರಾಜಸ್ಥಾನ್ ರಾಯಲ್ಸ್ ಚೊಚ್ಚಲ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿತ್ತು.2009ರಲ್ಲಿ ಅನಿಲ್ ಕುಂಬ್ಳೆ ಐದು ರನ್ನಿಗೆ ಐದು ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು. ಅದೇ ಸಾಲಿನಲ್ಲಿ ಮನೀಶ್ ಪಾಂಡೆ, ಐಪಿಎಲ್‌ನಲ್ಲಿ ಶತಕ ಬಾರಿಸಿದ ಭಾರತದ ಮೊದಲ ಬ್ಯಾಟರ್ ಎನಿಸಿದ್ದರು.

 

2011ರಲ್ಲಿ ಸಚಿನ್ ತೆಂಡೂಲ್ಕರ್ ಚೊಚ್ಚಲ ಐಪಿಎಲ್ ಶತಕ ಗಳಿಸಿದ್ದರು. 2013ರಲ್ಲಿ ಕ್ರಿಸ್ ಗೇಲ್ ಐಪಿಎಲ್‌ನಲ್ಲಿ ವೈಯಕ್ತಿಕ ಗರಿಷ್ಠ ಮೊತ್ತ (175*) ಗಳಿಸಿದ್ದರು.2016ರ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ನಾಲ್ಕು ಐಪಿಎಲ್ ಶತಕಗಳನ್ನು ಸಿಡಿಸಿದ್ದರು. 2021ರಲ್ಲಿ ರವೀಂದ್ರ ಜಡೇಜ ಒಂದೇ ಓವರ್‌ನಲ್ಲಿ 37 ಸಿಡಿಸುವ ಮೂಲಕ ಅಬ್ಬರಿಸಿದ್ದರು.

ಮಂಡ್ಯದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ  ಪ್ರತಿಕ್ರಿಯೆ

ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ದಾಖಲೆಯ ಐದು ಬಾರಿ ಟ್ರೋಫಿ ಗೆದ್ದಿವೆ. ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ಎರಡು ಬಾರಿ ಪ್ರಶಸ್ತಿ ಜಯಿಸಿವೆ.ಈ ಬಾರಿ ಒಟ್ಟು 10 ತಂಡಗಳು ಪ್ರಶಸ್ತಿಗಾಗಿ ಸೆಣಸುತ್ತಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೊಚ್ಚಲ ಟ್ರೋಫಿಯ ಹುಡುಕಾಟದಲ್ಲಿದೆ.

           ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap