ಮಂಗಳೂರು
ಹಾಸ್ಟೆಲ್ ಊಟ ತಿಂದು 150ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಮಂಗಳೂರಿನ ಸಿಟಿ ನರ್ಸಿಂಗ್ ಕಾಲೇಜಿನ 300ಕ್ಕೂ ಅಧಿಕ ವಿದ್ಯಾರ್ಥಿನಿಯರು ಶಕ್ತಿನಗರದ ಹಾಸ್ಟೆಲ್‌ನಲ್ಲಿ ನಿನ್ನೆ ರಾತ್ರಿ ಹಾಸ್ಟೆಲ್‌ನಲ್ಲಿ ಚಿಕನ್ ಗೀ ರೈಸ್ ಅನ್ನು ಸೇವನೆ ಮಾಡಿ ನಂತರ ಅಸ್ವಸ್ಥರಾಗಿದ್ದಾರೆ ಎಂದು .
ಸೋಮವಾರ ಮುಂಜಾನೆ 3 ಗಂಟೆಯ ವೇಳೆಗೆ ವಿದ್ಯಾರ್ಥಿನಿಯರಲ್ಲಿ ಹೊಟ್ಟೆನೋವು, ವಾಂತಿ-ಭೇಧಿ ಕಾಣಿಸಿಕೊಂಡಿದ್ದು, ಅನೇಕ ವಿದ್ಯಾರ್ಥಿನಿಯರು ಕಾಲೇಜಿಗೆ ಗೈರಾಗಿದ್ದರು.ಹಾಸ್ಟೆಲ್‌ನಲ್ಲಿರುವ ಇತರ ವಿದ್ಯಾರ್ಥಿನಿಯರು ಕಾಲೇಜಿಗೆ ಗೈರಾದ ವಿಚಾರ ತಿಳಿಯುತ್ತಿದ್ದಂತೆ ಫುಡ್ ಪಾಯಿಸನ್ ಆಗಿರುವ ವಿಚಾರ ಬೆಳಕಿಗೆ ಬಂದಿದೆ. ತುಂಬಾ ವಿದ್ಯಾರ್ಥಿನಿಯರು ವಿಷಾಹಾರ ಸೇವೆನೆ ಮಾಡಿದ್ದು, ಇದರಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಹೀಗಾಗಿ ರಾತ್ರಿ 8 ಗಂಟೆಯ ವೇಳೆಗೆ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರ ಹೆತ್ತವರು ಸಿಟಿ ಆಸ್ಪತ್ರೆ ಮುಂಭಾಗ ಜಮಾಯಿಸಿ, ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ