ಬಿದನಗೆರೆಯಲ್ಲಿ ಮೊಳಗಿದೆ ಹನುಮ ನಾಮ ಸ್ಮರಣೆ: 161 ಅಡಿ ಎತ್ತರದ ಪಂಚಮುಖಿ ಆಂಜನೇಯ ವಿಗ್ರಹ ಲೋಕಾರ್ಪಣೆ ನಾಳೆ

ಕುಣಿಗಲ್​: 

ತುಮಕೂರು ಜಿಲ್ಲೆ ಕುಣಿಗಲ್​ ತಾಲೂಕಿನ ಬಿದನಗೆರೆ ಬಸವೇಶ್ವರ ಮಠದಲ್ಲಿ ನಿರ್ಮಾಣವಾಗಿರುವ ವಿಶ್ವದಲ್ಲೇ ಪ್ರಥಮ ಎನ್ನಲಾದ 161 ಅಡಿ ಎತ್ತರದ ಪಂಚಮುಖಿ ಆಂಜನೇಯಸ್ವಾಮಿ ವಿಗ್ರಹವನ್ನು ಏ.10ರಂದು (ಶ್ರೀರಾಮ ನವಮಿ) ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್​ ಮೂಲಕ ಲೋಕಾರ್ಪಣೆ ಮಾಡಲಿದ್ದಾರೆ.

ವೇದಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಮಠದ ಸ್ವಾಮೀಜಿಗಳು ಮತ್ತು ಗಣ್ಯರು ಆಗಮಿಸಲಿದ್ದಾರೆ ಎಂದು ಕ್ಷೇತ್ರದ ಪೀಠಾಧಿಕಾರಿ ಡಾ.ಧನಂಜಯ ಗುರೂಜಿ ತಿಳಿಸಿದ್ದಾರೆ. ಪಂಚಮುಖಿ ಆಂಜನೇಯಸ್ವಾಮಿ ಉದ್ಘಾಟನೆಗೆ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್​ ಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ.

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಏ.14ರಂದು ಅಂಬೇಡ್ಕರ್ ಜಯಂತಿ ಕಡ್ಡಾಯ ಆಚರಣೆ : ಶಿಕ್ಷಣ ಇಲಾಖೆ ಆದೇಶ

     ಪ್ರಧಾನಿ ಅವರು ಆಂಜನೇಯ ಮೂರ್ತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ವರ್ಚುವಲ್​ ವಿಡಿಯೋ ಮೂಲಕ ಉದ್ಘಾಟಿಸುವುದಾಗಿ ತಿಳಿಸಿದ್ದಾರೆ. ಒಮ್ಮೆ ಕ್ಷೇತ್ರಕ್ಕೂ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಎಂದು ಗುರೂಜಿ ವಿವರಿಸಿದ್ದಾರೆ.

ಭಾನುವಾರ ಹೆಲಿಕಾಪ್ಟರ್​ ಮೂಲಕ ಕುಣಿಗಲ್​ ಸ್ಟಡ್​ಫಾರಂಗೆ ಆಗಮಿಸುವ ಸಿಎಂ ಬೊಮ್ಮಾಯಿ ಅವರು ಕಾರಿನಲ್ಲಿ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ಹರಿಹರ ಪಂಚಮಸಾಲಿ ಮಠದ ಶ್ರೀ ವಚನಾನಂದ ಸ್ವಾಮೀಜಿ, ಕೇಂದ್ರ ಸಚಿವ ಪ್ರಲ್ಹಾದ್​ಜೋಶಿ, ನಾರಾಯಣಸ್ವಾಮಿ, ಮಾಜಿ ಸಿಎಂ ಡಿ.ವಿ.ಸದಾನಂದಗೌಡ,

ಗುಜರಾತ್‌ನಲ್ಲಿ ಓರ್ವನಿಗೆ ಕೊರೋನವೈರಸ್ ರೂಪಾಂತರ XE ಸೋಂಕು ದೃಢ: ವರದಿ

ಸಚಿವ ಡಾ.ಸಿ.ಎನ್​.ಅಶ್ವತ್ಥನಾರಾಯಣ್​, ಸಂಸದರಾದ ಡಿ.ಕೆ.ಸುರೇಶ್​, ಮುನಿಸ್ವಾಮಿ, ಶಾಸಕರಾದ ಡಾ.ಎಚ್​.ಡಿ.ರಂಗನಾಥ್​, ರಾಜುಗೌಡ, ಮಾಜಿ ಸಚಿವ ಡಿ.ನಾಗರಾಜಯ್ಯ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧಾ, ಪಿಕಾರ್ಡ್​ ಬ್ಯಾಂಕ್​ ಅಧ್ಯಕ್ಷ ಡಿ.ಕೃಷ್ಣಕುಮಾರ್​, ಬಿಜೆಪಿ ಮುಖಂಡ ಎಚ್​.ಡಿ.ರಾಜೇಶ್​ಗೌಡ ಭಾಗವಹಿಸಲಿದ್ದಾರೆ ಎಂದು ಗುರೂಜಿ ತಿಳಿಸಿದ್ದಾರೆ.

ಸುಮಾರು 25 ಸಾವಿರ ಜನ ಸೇರುವ ನಿರೀಕ್ಷೆ ಇದ್ದು, ಉಪಹಾರ, ಊಟ, ಕುಡಿಯುವ ನೀರು, ಮಜ್ಜಿಗೆ, ಪಾನಕ, ಶೌಚಗೃಹ ವ್ಯವಸ್ಥೆ ಸೇರಿ ಮೂಲಸೌಕರ್ಯವನ್ನು ಕ್ಷೇತ್ರದ ವತಿಯಿಂದ ಕಲ್ಪಿಸಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ಧನಂಜಯ ಗುರೂಜಿ ಮನವಿ ಮಾಡಿದ್ದಾರೆ. ಡಿವೈಎಸ್​ಪಿ ಜಿ.ಆರ್​.ರಮೇಶ್​, ಸಿಪಿಐ ರಾಜು ನೇತೃತ್ವದ ತಂಡ ಭದ್ರತಾ ವ್ಯವಸ್ಥೆ ಕಲ್ಪಿಸಿದೆ.

ಕ್ಷೇತ್ರದ ಹಿನ್ನೆಲೆ: 21 ವರ್ಷದ ಹಿಂದೆ ಡಾ.ಧನಂಜಯ ಗುರೂಜಿ ಅವರು ಬಿದನಗೆರೆಯ ಗುಡಿಸಲಿನಲ್ಲಿ ಸತ್ಯ ಶನೇಶ್ವರ ಸ್ವಾಮಿ ಆರಾಧನೆ ಪ್ರಾರಂಭಿಸಿದರು. ಬಳಿಕ ಉದ್ಭವ ಬಸವಣ್ಣ, ಶನಿಶಿಗ್ನಾಪುರ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನಿತ್ಯ ಪೂಜೆ ನೆರವೇರಿಸುತ್ತಿದ್ದಾರೆ.

ಕ್ಷೇತ್ರಕ್ಕೆ ದೇಶ-ವಿದೇಶಗಳಿಂದ ಭಕ್ತರು ಆಗಮಿಸಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸುತ್ತಿದ್ದಾರೆ, ಕ್ಷೇತ್ರದಲ್ಲಿ ವೃದ್ಧಾಶ್ರಮ, ಅನಾಥಾಶ್ರಮ, ಉಚಿತ ಆರೋಗ್ಯ ಶಿಬಿರ, ಸರಳ ವಿವಾಹ, ಬಡವರಿಗೆ ಧನಸಹಾಯ, ವಸತಿ ಸೌಲಭ್ಯ, ದಾಸೋಹ ಸೇರಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ.

ಹೈವೋಲ್ಟೇಜ್ ಪಂದ್ಯದಲ್ಲಿ ಯಾರಿಗೆ ಸಿಗಲಿದೆ ಗೆಲುವು ? ಆರ್ ಸಿಬಿ – ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap