ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಹರಿತು ರಕ್ತ :17 ವರ್ಷದ ಯುವಕನ ಮರ್ಡರ್….!

ಬೆಂಗಳೂರು : 

    17 ವರ್ಷದ ಬಾಲಕನನ್ನು ಬರ್ಬರವಾಗಿ ಹತ್ಯೆಗೈದು ಬಿಸಾಡಿ ಹೋಗಿರುವ ಘಟನೆ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಅಬ್ಬಿಗೆರೆ ನಿವಾಸಿ ಮಂಜುನಾಥ್ ಕೊಲೆಯಾದ ದುರ್ದೈವಿ. ಮೊನ್ನೆ ರಾತ್ರಿ ಮಂಜುನಾಥ್ ತಲೆಗೆ ರಾಡ್​ನಿಂದ ಹೊಡೆದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.

   ಬಳಿಕ ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಶವವನ್ನು ಎಸೆದು ಬಂದಿದ್ದಾರೆ ಎನ್ನಲಾಗಿದೆ.ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇಲ್ನೋಟಕ್ಕೆ ಪ್ರೀತಿ ವಿಚಾರಕ್ಕೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link