ಲೋಕಸಭಾ ಚುನಾವಣೆ ಎದುರಿಸಲು ಸಿಎಂರಿಂದ ಮಹತ್ವದ ಸೂಚನೆ

ಬೆಂಗಳೂರು

    ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್‌ ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲ್ಲು ತಯಾರಿ ನಡೆಸುತ್ತಿದೆ.

   ಈಗಾಗಲೇ ಸಚಿವ ಸಂಪುಟಕ್ಕೆ 24 ಜನ ಸಚಿವರ ಸೇರ್ಪಡೆಯ ಬೆನ್ನಲೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲಲು ಸಜ್ಜಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸುವ ಗುರಿಯನ್ನು ಎಲ್ಲ ಸಚಿವರಿಗೂ ನೀಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

   ಇನ್ನೂ ಹೈಕಮಾಂಡ್‌ ನಾಯಕರ ಮಟ್ಟದಲ್ಲಿ ಲೋಕಸಭಾ ಚುನಾವಣಾ ವಿಚಾರವಾಗಿ ಚರ್ಚೆ ನಡೆದಿದ್ದು, ಸಚಿವ ಸಂಪುಟ ವಿಸ್ತರಣೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರ ಜೊತೆ ಚರ್ಚೆ ನಡೆಸಿದ್ದಾರೆ. ಒಂದು ವರ್ಷ ಲೋಕಸಭಾ ಚುನಾವಣೆಗೆ ತಯಾರಿ ನಡೆಸಬೇಕು. ಜನರ ನಿರೀಕ್ಷೆಗೆ ತಕ್ಕ ಆಡಳಿತ ನೀಡಬೇಕು ಎಂದು ಸಚಿವರುಗಳಿಗೆ ಸೂಚಿಸಿದ್ದಾರೆ.

    ಸಂಪುಟಕ್ಕೆ ಸೇರ್ಪಡೆಯಾಗಿರುವ 32 ಜನ ಸಚಿವರು ಕೊಟ್ಟಿರುವ ಖಾತೆಯ ಜೊತೆಗೆ ನಮ್ಮ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನ ಈಡೇಸುವತ್ತ ಶ್ರಮವಹಿಸಬೇಕು ಹಾಗೂ ಲೋಕಸಭಾ ಚುನಾವಣೆ ಹಿನ್ನಲೆ ಕ್ಷೇತ್ರದಲ್ಲಿ ಹೆಚ್ಚಿನ ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಸೂಚಿಸಿದ್ದಾರೆ.

   ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ವೇಳೆ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ನಾವು ಉಡುಗೊರೆ ರೂಪದಲ್ಲಿ ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಬೇಕು ಎಂದು ಸೂಚಿಸಿದ್ದಾರೆ. ಜನರ ಸಮಸ್ಯೆಗಳನ್ನು ಆಲಿಸಿ, ಸ್ಪಂದಿಸಬೇಕು. ಆಯಾ ಕ್ಷೇತ್ರದಲ್ಲಿ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಚಿವರು ಕ್ರಿಯಾಶೀಲ ರೂಪಿಸಿಕೊಳ್ಳಬೇಕು ಎಂಬ ನಿರ್ದೇಶನ ನೀಡಿದ್ದಾರೆ.

    ಇನ್ನೂ ಬೇರೆ ಬೇರೆ ಜಿಲ್ಲೆಗಳಿಂದ ಸಣ್ಣ ಸಣ್ಣ ಕೆಲಸಗಳಿಗೂ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಬೇಕು. ಕೆಲಸ ಮಾಡಿಸಿಕೊಳ್ಳಲು ವಿಧಾನಸೌಧದವರೆಗೂ ಜನ ಬಾರದಂತೆ ತಡೆಯಬೇಕು. ಕೊಟ್ಟಿರುವ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪುವಂತೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಹಿಂದಿನ ಆಡಳಿತದಲ್ಲಿ ಅವಧಿಯ ತಪ್ಪುಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಸಿದ್ದರಾಮಯ್ಯ ಸೂಚನೆಯನ್ನ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap