ಬೆಂಗಳೂರು
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಕೂಡಲೇ ಗೌರವ ವೇತನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರನ್ನು ಮಾಜಿ ಸಚಿವ ಕೆ.ಎಸ್. ಸುರೇಶ್‌ಕುಮಾರ್ ಒತ್ತಾಯಿಸಿದ್ದಾರೆ.
ಈ ಸಂಬAಧ ಸಚಿವರಿಗೆ ಪತ್ರ ಬರೆದಿರುವ ಸುರೇಶ್‌ಕುಮಾರ್, ರಾಜ್ಯದ 436 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14 ಸಾವಿರಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದು, ಅವರಿಗೆ ಕಳೆದ ಎರಡೂವರೆ ತಿಂಗಳುಗಳಿAದ ಗೌರವ ವೇತನ ದೊರೆತಿಲ್ಲ ಎಂದು ತಿಳಿಸಿದ್ದಾರೆ.
ಇದರಿಂದ ಅತಿಥಿ ಉಪನ್ಯಾಸಕರಿಗೆ ಕುಟುಂಬ ನಿರ್ವಹಣೆ ಕಷ್ಟಕರವಾಗಿದ್ದು, ಸಚಿವರು ಕೂಡಲೇ ವೇತನ ದೊರೆಯುವಂತೆ ಕ್ರಮಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ