ಹಾಲಿನ ಟ್ಯಾಂಕರ್‌ ಗೆ ಸ್ಲೀಪರ್‌ ಬಸ್‌ ಡಿಕ್ಕಿ : 18 ಸಾವು

ಲಕ್ನೋ: 

     ಹಾಲಿನ ಟ್ಯಾಂಕರ್ ಗೆ ಸ್ಲೀಪರ್‌ ಬಸ್ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಸಾವನ್ನಪ್ಪಿ 20 ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೊದ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಮುಂಜಾನೆ ನಡೆದಿದೆ.

    ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಹಾರದ ಶಿವಗಢದಿಂದ ದೆಹಲಿಗೆ ಹೋಗುತ್ತಿದ್ದ ಬಸ್ ಬೆಹ್ತಾ ಮುಜಾವರ್ ಪೊಲೀಸ್ ಠಾಣೆ ವ್ಯಾಪ್ತಿಯ ಏರ್‌ಸ್ಟ್ರಿಪ್‌ನಲ್ಲಿ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.

   ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಟ್ಯಾಂಕರ್ ಹಾರಿ ಹೋಗಿವೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ. ಅದೇ ವೇಳೆ ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಆಗಮಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ. ಸಿಒ ಬಂಗಾರ್ಮೌ ಅರವಿಂದ್ ಚೌರಾಸಿಯಾ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಸ್ ಬಿಹಾರದ ಸೀತಾಮರ್ಹಿಯಿಂದ ದೆಹಲಿಗೆ ಹೋಗುತ್ತಿತ್ತು ಎಂದು ಹೇಳಲಾಗುತ್ತಿದೆ. ಅಪಘಾತದ ಮಾಹಿತಿ ಪಡೆದ ಡಿಎಂ ಮತ್ತು ಎಸ್ಪಿ ಕೂಡ ಸ್ಥಳಕ್ಕೆ ಆಗಮಿಸಿದರು.

    ಬೆಹ್ತಾ ಮುಜಾವರ್ ಪ್ರದೇಶದ ಅಡಿಯಲ್ಲಿ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇ ಕಿಮೀ ಸಂಖ್ಯೆ 247 ರಲ್ಲಿ ಬೆಳಿಗ್ಗೆ 05.15 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಿಹಾರದಿಂದ ದೆಹಲಿಗೆ ಹೋಗುತ್ತಿದ್ದ ಸ್ಲೀಪರ್‌ ಬಸ್  , ಹಾಲಿನ ಟ್ಯಾಂಕರ್  ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 18 ಜನರು ಸಾವನ್ನಪ್ಪಿದ್ದಾರೆ.

    ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. “ದುಃಖದಲ್ಲಿರುವ ಕುಟುಂಬಗಳಿಗೆ ನನ್ನ ಸಂತಾಪವಿದೆ. ಸ್ಥಳದಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಲು ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ. ಸಾರಿಗೆ ಸಚಿವ ದಯಾಶಂಕರ್ ಸಿಂಗ್ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap