ಬೆಂಗಳೂರು:
ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಕಳೆದ 10 ವರ್ಷಗಳ ಬಳಿಕ ತೀವ್ರ ಬರ ಎದುರಾಗಿದ್ದು ರಾಜ್ಯಾದ್ಯಂತ ಒಟ್ಟು 195 ತಾಲೂಕುಗಳಲ್ಲಿ ಬರ ಆವರಿಸಿದೆ ಎಂದು ಶಿಫಾರಸು ಮಾಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಇಂದು ಬುಧವಾರ ಬೆಂಗಳೂರಿನಲ್ಲಿ ಘೋಷಿಸಿದ್ದಾರೆ.
ಈಗ ಎಲ್ಲ ಜಿಲ್ಲೆಗಳಿಂದ ಬೆಳೆ ಸಮೀಕ್ಷೆ ವರದಿ ಬಂದಿದೆ. 161 ತಾಲೂಕುಗಳಲ್ಲಿ ತೀವ್ರವಾದ ಬರ ಪರಿಸ್ಥಿತಿ ಇದೆ. 34 ತಾಲೂಕುಗಳಲ್ಲಿ ಸಾಧಾರಣ ಬರದ ಪರಿಸ್ಥಿತಿ. ಒಟ್ಟು 195 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಉಳಿದ 40 ತಾಲೂಕುಗಳಲ್ಲಿ ಮಳೆ ಕೊರತೆ ಇದ್ದರೂ ಕೂಡ ತೇವಾಂಶ ಕೊರತೆ ಕಂಡು ಬರುತ್ತಿಲ್ಲ. ತನ್ನ ಮಾರ್ಗಸೂಚಿಗಳ ಪ್ರಕಾರ, ಮಧ್ಯಮ ಬರಕ್ಕೆ ಕೇಂದ್ರ ಸರ್ಕಾರ ಪರಿಹಾರ ಕೊಡಬಹುದು ಅಥವಾ ಇಲ್ಲದೇ ಇರಬಹುದು ಎಂದು ಹೇಳಿದರು.
ಬಾಗಲಕೋಟೆ-2, ಬೆಳಗಾವಿ-8, ಬೆ.ಗ್ರಾಮೀಣ-3, ಬೆ.ನಗರ-5, ಚಿಕ್ಕಮಗಳೂರು-5, ಚಿತ್ರದುರ್ಗ-4
ಧಾರವಾಡ-3, ಗದಗ-5, ಹಾಸನ-5, ಕಲಬುರಗಿ-9,ಕೊಡಗು-2, ಕೋಲಾರ-5, ತುಮಕೂರು-5
ಉತ್ತರ ಕನ್ನಡ-9, ವಿಜಯಪುರ-10, ಯಾದಗಿರಿ-6,ದಕ್ಷಿಣ ಕನ್ನಡ-2, ಬೀದರ್-1, ಚಾಮರಾಜನಗರ-4
ದಾವಣಗೆರೆ-3, ಕಲಬುರಗಿ-5, ಕೊಪ್ಪಳ-2, ಮಂಡ್ಯ-5,ರಾಮನಗರ-2, ಉಡುಪಿ-2, ವಿಜಯನಗರದಲ್ಲಿ 4 ತಾಲೂಕುಗಳಲ್ಲಿ ಬರದ ಕ್ಷಾಮ ಎದುರಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
