ಬೆಂಗಳೂರು:
ಹೆಣ್ಣೂರು ಹಾಗೂ ಸದಾಶಿವನಗರ ಸೇರಿ ಪ್ರತ್ಯೇಕ 2 ಕಡೆಗಳಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಸರಗಳನ್ನು ಹಿಂದಿನಿಂದ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಶುಕ್ರವಾರ ಬೆಳಿಗ್ಗೆ ಕಸಿದು ಪರಾರಿಯಾಗಿದ್ದಾರೆ.
ಹೆಣ್ಣೂರಿನ ಹೆಚ್.ಬಿ.ಆರ್ ಲೇಔಟ್ ಬಳಿ ಬೆಳಿಗ್ಗೆ 8.20ರ ವೇಳೆ ನಡೆದುಕೊಂಡು ಹೋಗುತ್ತಿದ್ದ ಜ್ಯೋತಿ ಅವರ ಕತ್ತಿನಲ್ಲಿದ್ದ 35 ಗ್ರಾಂ ತೂಕದ ಚಿನ್ನದ ಸರವನ್ನು ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಸಿದು ಪರಾರಿಯಾಗಿದ್ದಾರೆ.
ಜ್ಯೋತಿ ಅವರು ವಾಯುವಿಹಾರಕ್ಕೆ ಹೋಗಿ ಮನೆಗೆ ನಡೆದುಕೊಂಡು ಬರುತ್ತಿದ್ದಾಗ ಈ ಕೃತ್ಯ ನಡೆದಿದ್ದು, ಹೆಣ್ಣೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದಾದ ಒಂದೂವರೆ ಗಂಟೆಯೊಳಗೆ ನ್ಯೂ ಬಿಎಲ್ ರಸ್ತೆಯ ದೇವಸಂದ್ರ ಬಸ್ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ 30 ಗ್ರಾಂ ಚಿನ್ನದ ಸರವನ್ನು ದುಷ್ಕರ್ಮಿಗಳು ಕಸಿದು ಪರಾರಿಯಾಗಿದ್ದಾರೆ.
ಬೆಳಿಗ್ಗೆ 9.45ರ ವೇಳೆ ಮಹಿಳೆಯು ಮನೆಗೆ ನಡೆದುಕೊಂಡು ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಮಹಿಳೆಯ ಪತಿ ತ್ಯಾಗರಾಜ್ ಅವರು ದೂರು ನೀಡಿದ್ದು, ಪ್ರಕರಣ ದಾಖಲಿಸಿರುವ ಸದಾಶಿವನಗರ ಪೆÇಲೀಸರು ದುಷ್ಕರ್ಮಿಗಳ ಪತ್ತೆಗೆ ಶೋಧ ನಡೆಸಿದ್ದಾರೆ
