ಹಾಸನ:
ಓವರ್ ಟೇಕ್ ಮಾಡಲು ಹೋಗಿ ಎದುರಿಗೆ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮಡಬ ಗ್ರಾಮದ ಬಳಿ ಘಟನೆ ಭೀಕರ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಮಂಜುನಾಥ್ (27) ಮತ್ತು ಆತನ ಸ್ನೇಹಿತ ಕುಮಾರ್ (28)ಮೃತಪಟ್ಟ ಯುವಕರು. ಚನ್ನರಾಯಪಟ್ಟಣದಿಂದ ದಾವಣಗೆರೆಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಅರಸೀಕೆರೆ ಕಡೆಯಿಂದ ಮಡಬಕ್ಕೆ ಕಾರು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಕಾರಿನ ಚಾಲಕ ವಾಹನವೊಂದನ್ನು ಓವರ್ಟೇಕ್ ಮಾಡಲು ಹೋಗಿ ಎದುರಿಗೆ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿರುವುದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ