ಕುಸಿದ ಎರಡು ಅಂತಸ್ಥಿನ ಕಟ್ಟಡ : 2 ಸಾವು

ನವದೆಹಲಿ:

   ಎರಡು ಅಂತಸ್ತಿನ ಹಳೆಯ ಕಟ್ಟಡ ಕುಸಿದ ಪರಿಣಾಮ ಇಬ್ಬರು ಕಾಮಿರ್ಕರು ಮೃತಪಟ್ಟು, ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ದೆಹಲಿಯ ಕಬೀರ್‌ ನಗರದಲ್ಲಿ ಗುರುವಾರ ನಡೆದಿದೆ.ಮೃತ ಕಾರ್ಮಿಕರನ್ನು ಅರ್ಷದ್ (30) ಮತ್ತು ತೌಹಿತ್‌ (20) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಕಾರ್ಮಿಕ ರೆಹಾನ್ (22) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

   ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಈಶಾನ್ಯ ಡಿಸಿಪಿ ಜಾಯ್ ಟಿರ್ಕಿ, ನಡುರಾತ್ರಿ ಕಟ್ಟಡ ಕುಸಿತದ ಬಗ್ಗೆ ನಮಗೆ ಕರೆ ಬರುತ್ತಿದ್ದಂತೆ, ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೂರು ಮಂದಿಯನ್ನು ಹೊರಕ್ಕೆ ತೆಗೆಯಲಾಯಿತು.

   ತಕ್ಷಣ ಮೂವರನ್ನೂ ಜಿಟಿಬಿ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ, ಚಿಕಿತ್ಸೆ ಫಲಿದೆ ಅರ್ಷದ್ ಮತ್ತು ತೌಹಿದ್ ಎಂಬ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೋರ್ವ ರೆಹಾನ್ ಎಂಬ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

   ಕುಸಿದಿರುವ ಕಟ್ಟಡದ ಮಾಲೀಕನನ್ನು ಶಾಹಿದ್ ಎಂದು ಗುರುತಿಸಲಾಗಿದ್ದು, ಆತನ ಪತ್ತೆಯಾಗಿ ಪೊಲೀಸರು ಶೋಧ ಕಾರ್ಯವನ್ನು ಮುಂದುವರೆಸಿದ್ದಾರೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Recent Articles

spot_img

Related Stories

Share via
Copy link
Powered by Social Snap