ಭಾರಿ ಮಳೆಗೆ : ವಿದ್ಯುತ್‌ ಸ್ಪರ್ಶಿಸಿ 2 ಸಾವು ….!

ಮಂಗಳೂರು:

    ಭಾರೀ ಮಳೆಗೆ ಕರಾವಳಿಯ ಉಳ್ಳಾಲ ಬಳಿ ಮನೆ ಕುಸಿದು ನಾಲ್ವರು ಮೃತಪಟ್ಟ ಬೆನ್ನಲ್ಲೇ ಭಾರೀ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಪ್ರವಹಿಸಿ ಇಬ್ಬರು ಬಲಿಯಾದ ದಾರುಣ ಘಟನೆ ಮಂಗಳೂರಿನ ಪಾಂಡೇಶ್ವರ ರೊಸಾರಿಯೋ ಚರ್ಚ್ ಹಿಂಬದಿ ಗುರುವಾರ ಮುಂಜಾನೆ ನಡೆದಿದೆ.

   ಇದನ್ನು ಕಂಡ ಮತ್ತೊರ್ವ ಚಾಲಕ ಗೋಣಿ ಚೀಲ ಹಿಡಿದು ಆತನ ರಕ್ಷಣೆಗೆ ಮುಂದಾಗಿದ್ದಾರೆ,ಈ ಸಂದರ್ಭ ಅವರೂ ವಿದ್ಯುತ್ ಅಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

   ಜಿಲ್ಲೆಯಾದ್ಯಂತ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು, ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬುವವರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಇಂದು ನಸುಕಿನ ಜಾವ ನಡೆದಿದೆ.

   ಬನ್ನೂರು ಜೈನರಗುರಿ ಮಜೀದ್ ಎಂಬವರ ಮನೆಯ ಪಕ್ಕದ ಧರೆಯೊಂದರ ಮಣ್ಣು ಮಳೆಗೆ ಸಡಿಲಗೊಂಡು ಮನೆ ಮೇಲೆ ಕುಸಿದು ಬಿದ್ದಿದೆ. ಮಜೀದ್ ಮತ್ತು ಮನೆ ಮಂದಿ ಮಕ್ಕಳು ಮಲಗಿದ್ದ ಕೊಠಡಿಯ ಮೇಲೆ ಮಣ್ಣು ಕುಸಿದ ಪರಿಣಾಮ ಮನೆಯ ಅರ್ಧ ಭಾಗ ಕುಸಿದಿತ್ತು. ಈ ವೇಳೆ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದರು. ತಕ್ಷಣ ಮನೆಯಲ್ಲಿದ್ದ ಉಳಿದವರು ಮಕ್ಕಳನ್ನು ಮಣ್ಣಿನಡಿಯಿಂದ ಹೊರ ಎಳೆದು ಅಪಾಯವನ್ನು ತಪ್ಪಿಸಿದ್ದಾರೆ.

   ಘಟನಾ ಸ್ಥಳಕ್ಕೆ ನಗರಸಭಾ ಸದಸ್ಯ ಪಿ ಜಿ ಜಗನ್ನಿವಾಸ ರಾವ್, ಪೌರಾಯುಕ್ತ ಮಧು ಎಸ್ ಮನೋಹರ್ ಸಹಿತ ನಗರಸಭೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನಗರಸಭೆ ಮತ್ತು ಸ್ಥಳೀಯರು ಮಣ್ಣು ತೆರವು ಕಾರ್ಯ ಮಾಡಿದ್ದಾರೆ.

    ಭಾರಿ ಮಳೆಯಿಂದ ಕುಮಾರಧಾರ ಸ್ನಾನಘಟ್ಟ ಮುಳುಗಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಿದೆ. ಕುಮಾರಧಾರ ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ‌ ನೀಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap