ಬೈಕ್‌ಗೆ ಪೊಲೀಸ್‌ ಜೀಪ್‌ ಡಿಕ್ಕಿ : ಇಬ್ಬರಿಗೆ ಗಾಯ

ಕೋಲಾರ

     ಬೈಕ್‌ಗೆ ಪೋಲಿಸ್ ವಾಹನ ಡಿಕ್ಕಿ ಹೊಡೆದಿದ್ದು, ಈ ವೇಳೆ ದ್ವಿಚಕ್ರ ವಾಹನ ಸವಾರರಿಬ್ಬರಿಗೆ ಗಾಯವಾಗಿದ್ದು, ಈ ಪೈಕಿ ಓರ್ವನ ಸ್ಥಿತಿ ಗಂಭೀರವಾದ ಘಟನೆ ಕೋಲಾರದಲ್ಲಿ ನಡೆದಿದೆ. ಬೆಂಗಳೂರುನಿಂದ ಕೋಲಾರದಲ್ಲಿ ನಡೆಯುವ ಸಿಎಂ ಕಾರ್ಯಕ್ರಮಕ್ಕೆ ತೆರಳುತಿದ್ದ ವೇಳೆ ಪೊಲೀಸ್ ವಾಹನವು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.

    ರಾಷ್ಟೀಯ ಹೆದ್ದಾರಿ ಬೆತ್ತನಿ ಗ್ರಾಮದ ಬಳಿ ಈ ಅಪಘಾತ ನಡೆದಿದೆ. ಬಳಿಕ ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೋಲಾರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸದ್ಯ ಈ ಘಟನೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link