ಜಮ್ಮು ಕಾಶ್ಮೀರ :
ಹೊಸವರ್ಷದ ದಿನದಂದು ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರ ದಾಳಿಗೆ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಜಮ್ಮು ಕಾಶ್ಮೀರದ ನೌಶೆರಾ ದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಮಾಹಿತಿ ತಿಳಿದಿದ್ದ ಸೇನಾಪಡೆಗಳು ಕಾರ್ಯಾಚರಣೆಗಿಳಿದಿದ್ದವು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಇಬ್ಬರು ಭಾರತೀಯ ಯೋಧರು ವೀರಮರಣವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಘಟನೆ ಕುರಿತು ಮಾಹಿತಿ ನೀಡಿರುವ ಜಮ್ಮು ಮೂಲದ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ಅವರು, ನೌಶೇರಾ ಸೆಕ್ಟರ್ ನಲ್ಲಿ ನಡೆದ ಶೋಧ ಕಾರ್ಯಾಚರಣೆಯ ವೇಳೆ ಇಬ್ಬರು ಸೇನಾ ಯೋಧರು ಸಾವನ್ನಪ್ಪಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
