ಕರ್ನಾಟಕ ವಿಧಾನಸಭಾ ಚುನಾವಣೆ : ಬೆಳಿಗ್ಗೆ 11 ಗಂಟೆವರೆಗೆ ಶೇ.20.99ರಷ್ಟು ಮತದಾನ

ಬೆಂಗಳೂರು:

     ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಬೆಳಿಗ್ಗೆ 11 ಗಂಟೆವರೆಗೆ ಶೇ.20.99ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ.

     ಬೆಂಗಳೂರು ಸೆಂಟ್ರಲ್​ ಶೇಕಡಾ 19.30ರಷ್ಟು, ಬೆಂಗಳೂರು ಉತ್ತರ ಶೇಕಡಾ 18.34ರಷ್ಟು, ಬೆಂಗಳೂರು ದಕ್ಷಿಣ ಶೇಕಡಾ 19.18ರಷ್ಟು, ಬಾಗಲಕೋಟೆ ಜಿಲ್ಲೆಯಲ್ಲಿ ಶೇಕಡಾ 23.44ರಷ್ಟು,  ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 20.23ರಷ್ಟು,  ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇಕಡಾ 17.72ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

       ಬೆಳಗಾವಿ ಜಿಲ್ಲೆಯಲ್ಲಿ ಶೇಕಡಾ 20.76ರಷ್ಟು, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 23.56ರಷ್ಟು, ಬೀದರ್ ಜಿಲ್ಲೆಯಲ್ಲಿ ಶೇಕಡಾ 2.54ರಷ್ಟು, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 20.66ರಷ್ಟು,  ಚಾಮರಾಜನಗರ ಜಿಲ್ಲೆಯಲ್ಲಿ ಶೇಕಡಾ 16.77ರಷ್ಟು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇಕಡಾ 21.46ರಷ್ಟು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇಕಡಾ 22.29ರಷ್ಟು ಮತದಾನವಾಗಿದ್ದರೆ,  ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 18.56ರಷ್ಟು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 28.46ರಷ್ಟು, ದಾವಣಗೆರೆ ಜಿಲ್ಲೆಯಲ್ಲಿ ಶೇಕಡಾ 21.32ರಷ್ಟು, ಧಾರವಾಡ ಜಿಲ್ಲೆಯಲ್ಲಿ ಶೇಕಡಾ 20.82ರಷ್ಟು, ಗದಗ ಜಿಲ್ಲೆಯಲ್ಲಿ ಶೇಕಡಾ 21.14ರಷ್ಟು, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 717.89ರಷ್ಟು, ಹಾಸನ ಜಿಲ್ಲೆಯಲ್ಲಿ ಶೇಕಡಾ 22.18ರಷ್ಟು, ಹಾವೇರಿ ಜಿಲ್ಲೆಯಲ್ಲಿ ಶೇಕಡಾ 19.44ರಷ್ಟು ಮತದನಾನವಾಗಿದೆ.

 

     ಚುನಾವಣಾ ಅಖಾಡಕ್ಕಿಳಿದಿರುವ 2615 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಸಂಜೆ 6 ಗಂಟೆಯವರೆಗೆ ಮತದಾರರು ತಮ್ಮ ಹಕ್ಕು ಚಲಾಯಿಸಬಹುದಾಗಿದೆ.

    ಚುನಾವಣಾ ಆಯೋಗ ಬೆಂಗಳೂರಿನ ಮತಗಟ್ಟೆಯ ಸುತ್ತ ಸಿಸಿ ಕ್ಯಾಮಾರ ಅಳವಡಿಕೆ ಮಾಡಿದ್ದು, ಜಿಲ್ಲಾ ಚುನಾವಣಾ ಆಯೋಗ ಪ್ರತಿ ಮತಗಟ್ಟೆಗೆ 5 ಜನ ಅಧಿಕಾರಿಗಳನ್ನು ನಿಯೋಜನೆ ಮಾಡಿದೆ.

    ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ಅಂಗವಿಕಲರಿಗೆ ಸುಲಭವಾಗಿ ಮತದಾನ ಮಾಡಲು ವ್ಯವಸ್ಥೆಗಳನ್ನು ಮಾಡಿದೆ.

    ಮೈಸೂರು ಜಿಲ್ಲೆಯಲ್ಲಿ ಬಿಗಿ ಭದ್ರತೆಯೊಂದಿಗೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಜನತೆ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಹಕ್ಕು ಚಲಾಯಿಸುತ್ತಿದ್ದಾರೆ.

     ಜಿಲ್ಲೆಯಲ್ಲಿ ಒಟ್ಟು 2,905 ಮತಗಟ್ಟೆಗಳಿದ್ದು, 13,17,121 ಪುರುಷ ಮತದಾರರು, 13,38,637 ಮಹಿಳಾ ಮತದಾರರು ಹಾಗೂ 230 ಇತರೆ ಮತದಾರರಿದ್ದು, ಒಟ್ಟು 26,55,988 ಮತದಾರರಿದ್ದಾರೆ.

     ಮೈಸೂರು ಜಿಲ್ಲೆಯಲ್ಲಿ ಚಾಮರಾಜ, ಕೃಷ್ಣರಾಜ, ನರಸಿಂಹರಾಜ, ಚಾಮುಂಡೇಶ್ವರಿ, ಕೆಆರ್ ನಗರ, ಪಿರಿಯಾಪಟ್ಟಣ, ವರುಣಾ, ಹುಣಸೂರು, ನಂಜನಗೂಡು, ಟಿ ನರಸೀಪುರ ಮತ್ತು ಎಚ್‌ಡಿ ಕೋಟೆ ಸೇರಿ ಒಟ್ಟು 11 ಕ್ಷೇತ್ರಗಳಿವೆ.

     ಜಿಲ್ಲೆಯಲ್ಲಿ 385 ಸೂಕ್ಷ್ಮ ಮತಗಟ್ಟೆಗಳಿದ್ದು, ಈ ಪೈಕಿ 252 ಮತಗಟ್ಟೆಗಳು ಮೈಸೂರು ನಗರದಲ್ಲಿದೆ. ಸಿದ್ದರಾಮಯ್ಯ ಹಾಗೂ ವಿ ಸೋಮಣ್ಣ ಅವರು ಕಣಕ್ಕಿಳಿದಿರುವ ವರುಣಾ ಕ್ಷೇತ್ರದಲ್ಲಿ 54 ಸೂಕ್ಷ್ಮ ಮತಗಟ್ಟೆಗಳಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದೆ.

    ಮತದಾನ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು 5620 ಇವಿಎಂಗಳು, 4266 ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಯಂತ್ರಗಳು, 3936 ಕಂಟ್ರೋಲ್ ಯೂನಿಟ್‌ಗಳು ಮತ್ತು ಶಾಯಿ ಬಾಟಲಿಗಳ ವ್ಯವಸ್ಥೆ ಮಾಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap