ಬೆಂಗಳೂರು:
ದೀಪಾವಳಿಯನ್ನು ಸುರಕ್ಷಿತವಾಗಿ ಆಚರಿಸಲು ಬೆಂಗಳೂರಿಗರು ಕ್ರಮ ಕೈಗೊಂಡಿದ್ದರೂ ಭಾನುವಾರ ಮಧ್ಯರಾತ್ರಿಯವರೆಗೂ ನಗರದಲ್ಲಿ 20 ಪಟಾಕಿ ಅವಘಡ ಪ್ರಕರಣಗಳು ವರದಿಯಾಗಿವೆ.
ಪಟಾಕಿ ಸಿಡಿತದಿಂದ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ವರದಿಯಾಗಿದೆ ಎಂದು ನಾರಾಯಣ ಹೆಲ್ತ್‌ನ ಅಧ್ಯಕ್ಷ ಡಾ.ರೋಹಿತ್ ಶೆಟ್ಟಿ ಹೇಳಿದ್ದಾರೆ. ಗಾಯಾಳುಗಳ ಪೈಕಿ ಶೇ. 90 ರಷ್ಟು ಮಂದಿ ನೋಡುಗರು ಅಥವಾ ಕೆಲಸದಿಂದ ಮನೆಗೆ ಮರಳುತ್ತಿದ್ದ ಅಮಾಯಕ ನಾಗರಿಕರಾಗಿದ್ದಾರೆ. ಇದು ಆತಂಕಕ್ಕೆ ದೊಡ್ಡ ಕಾರಣ ಅಂದು ಅವರು ತಿಳಿಸಿದ್ದಾರೆ.
ಶಂಕರ ನೇತ್ರಾಲಯದಲ್ಲಿ ಎರಡು ಪಟಾಕಿ ಗಾಯದ ಪ್ರಕರಣ ವರದಿಯಾಗಿದೆ. ಇದರಲ್ಲಿ ಆರು ಮತ್ತು ಏಳು ವರ್ಷದ ಮಕ್ಕಳು ಪಟಾಕಿಯಿಂದ ಗಾಯಗೊಂಡಿದ್ದಾರೆ. ಪಟಾಕಿ ಹಚ್ಚುವುದನ್ನು ನೋಡುತ್ತಿದ್ದಾಗ ಏಳು ವರ್ಷದ ಹುಡುಗ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.