ಬೆಂಗಳೂರು:
ಎತ್ತಿನಹೊಳೆ ಯೋಜನೆಯಿಂದ ಶಿರಾ ತಾಲ್ಲೂಕಿಗೆ ಕುಡಿಯುವ ನೀರಿಗಾಗಿ ಹಂಚಿಕೆಯಾಗಿರುವ ಯೋಜನೆಯನ್ನು ಮಾರ್ಪಡಿಸಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಾಗಿ ರೂಪಿಸಲು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಸಮನ್ವಯ ಸಮತಿಗೆ ಮನವಿ ಮಾಡಲು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಎತ್ತಿನಹೊಳೆ ಯೋಜನೆ ಮೂಲಕ ಶಿರಾ ತಾಲೂಕಿನ ೨೦೦ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸಂಬAಧ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಬಿ ಜಯಚಂದ್ರ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಮಂಡಳಿ ಅಧಿಕಾರಿಗಳು ಭಾಗವಹಿಸಿದ್ದರು.
ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರರಾದ ಕೆ .ಜಯಪ್ರಕಾಶ್ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಮಂಡಳಿ ವ್ಯವಸ್ಥಾಪಕ ನಿರ್ದೇಶಕರಾದ ಸಣ್ಣ ಚಿತ್ತಯ್ಯ ಮುಖ್ಯ ಇಂಜಿನಿಯರ್ ವರದಯ್ಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಆನಂದ್ ಕುಮಾರ್ ಹಾಗೂ ಸಹಾಯಕ ಅಭಿಯಂತರರಾದ ಯೋಗೇಶ್ ಹಾಗೂ ಟಿ.ಬಿ ಜಯಚಂದ್ರ ಅವರ ನೀರಾವರಿ ಸಲಹೆಗಾರರ ಈಶ್ವರಯ್ಯ ಅವರು ಸಭೆಯಲ್ಲಿ ಹಾಜರಿದ್ದರು.