2024 ರಲ್ಲಿ ಬಿಜೆಪಿ ಸೋಲಲಿದೆ : ರಾಹುಲ್‌ ಗಾಂಧಿ

ನವದೆಹಲಿ:

     ಕಾಂಗ್ರೆಸ್‌ ಪಕ್ಷವು ಎಲ್ಲಾ ವಿರೋಧ ಪಕ್ಷಗಳೊಂದಿಗೆ ನಿರಂತರವಾಗಿ ಮಾತುಕತೆ ನಡೆಸುತ್ತಿದೆ. ಮಾತುಕತೆಗಳ ನಂತರ ಮಹಾಒಕ್ಕೂಟ ರಚನೆಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಒಳ್ಳೇಯದೇ ಆಗುತ್ತದೆ ಎನ್ನುವ ನಂಬಿಕೆಯೂ ನನಗಿದೆ ಎಂದು ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

     ವಾಷಿಂಗ್ಟನ್‌ನ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಪತ್ರಕರ್ತರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಅವರು  ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ, ಇದೆಲ್ಲವನ್ನೂ ಮೀರಿ 2024ರ ಚುನಾವಣೆಯಲ್ಲಿ ಪ್ರತಿಪಕ್ಷಗಳು ಬಿಜೆಪಿಯನ್ನು ಸೋಲಿಸಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

   
    ‘ನರೇಂದ್ರ ಮೋದಿ ಅವರು ಭಾರತೀಯ ಸಮಾಜವನ್ನು ಧ್ರುವೀಕರಿಸುತ್ತಿದ್ದಾರೆ ಮತ್ತು ಒಡೆಯುತ್ತಿದ್ದಾರೆ. ಅವರ ಆಡಳಿತದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ’ ಎಂದು ಅವರು ಆರೋಪಿಸಿದರು.

 

    ‘140 ಕೋಟಿ ಜನರಿರುವ, ವಿವಿಧ ನಂಬಿಕೆಗಳ, ಜಾತ್ಯತೀತ ಸಂವಿಧಾನದ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಹಿಂದುತ್ವವನ್ನು ಪ್ರತಿಪಾದಿಸುತ್ತಿದೆ’ ಎಂದು ಅವರು ಆರೋಪಿಸಿದರು.ಜೂನ್ 22 ರಂದು ಮೋದಿ ಅಮೆರಿಕ ಭೇಟಿ ಕೈಗೊಳ್ಳಲಿದ್ದಾರೆ. ಅವರ ಸ್ವಾಗತಕ್ಕೆ ಶ್ವೇತಭವನದಲ್ಲಿ ಭಾರಿ ಸಿದ್ಧತೆಗಳು ನಡೆಯುತ್ತಿರುವ ನಡುವೆಯೇ ರಾಹುಲ್‌ ಅಮೆರಿಕಕ್ಕೆ ಭೇಟಿ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link