2026 ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಆಹ್ವಾನ

ನವದೆಹಲಿ:

   2026 ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿಗಳು-2026 ಗಾಗಿ ನಾಮನಿರ್ದೇಶನಗಳನ್ನು ಆಹ್ವಾನಿಸಿದ್ದು ಜುಲೈ 31 ರವರೆಗೆ ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ನಾಮನಿರ್ದೇಶನಗಳನ್ನು ಸಲ್ಲಿಸಬಹುದಾಗಿದೆ.

   ಪದ್ಮ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಸೇರಿವೆ. 1954 ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಈ ಪ್ರಶಸ್ತಿಯು ’ವಿಶಿಷ್ಟ ಕಾರ್ಯ’ ಗುರುತಿಸಲು ಉದ್ದೇಶಿಸಿದ್ದು, ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಎಲ್ಲಾ ವಿಭಾಗಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆ ಮಾಡಿದವರಿಗೆ ನೀಡಲಾಗುತ್ತದೆ.

Recent Articles

spot_img

Related Stories

Share via
Copy link