ತುರುವೇಕೆರೆ
ಪಟ್ಟಣದಬೆಂಗಳೂರು ಬಸ್ ನಿಲ್ದಾಣದ ಪಕ್ಕದಲ್ಲಿರುವ ಅಂಗವಿಕಲರ ಕಚೇರಿ ಆವರಣದಲ್ಲಿ ವಿಕಲಚೇತನ ಸಂಘದ ವತಿಯಿಂದ ಬುಧವಾರ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ದೊಡ್ಡಾಘಟ್ಟ ಚಂದ್ರೇಶ್ ಮಾತನಾಡಿ ದೇಶದಲ್ಲಿ ಪ್ರಕೃತಿಯ ಸಂಪನ್ಮೂಲಗಳಿಗೇನು ಕಡಿಮೆ ಇಲ್ಲ. ಅವುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮುಂದುವರೆಯಬೇಕು. ಯುವಕರು ದೇಶಾಭಿಮಾನವನ್ನು ಮೈಗೂಡಿಸಿಕೊಂಡು ದೇಶದ ಅಭಿವೃದ್ಧಿಗೆ ಕಂಕಣ ತೊಡಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಎನ್.ಆರ್.ಜಯರಾಮ್, ತಾಲ್ಲೂಕು ಪಂಚಾಯ್ತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಭೈರಪ್ಪ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ಮಹನೀಯರನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದರು.
ತಾ.ಪಂ. ಸದಸ್ಯರಾದ ಮಂಜುನಾಥ್, ವಿಕಲಚೇತನರ ಸಂಘದ ಅಧ್ಯಕ್ಷ ವಾಸು, ಗೌರವಾಧ್ಯಕ್ಷ ಮಹಲಿಂಗಯ್ಯ, ಕಾರ್ಯದರ್ಶಿ ನಟೇಶ್, ಅಮ್ಮಸಂದ್ರ ಲಕ್ಷ್ಮೀಕಾಂತ್ ಸೇರಿದಂತೆ ಸದಸ್ಯರುಗಳು ಹಾಗೂ ವಿವಿಧ ಮುಖಂಡರುಗಳು ಉಪಸ್ಥಿತರಿದ್ದರು.
