ಗುಬ್ಬಿ:
ಶಿಕ್ಷಕ ವೃತ್ತಿ ಎಲ್ಲಾ ವೃತ್ತಿಗಳಿಗಿಂತಲೂ ಸರ್ವ ಶ್ರೇಷ್ಠವಾದುದಾಗಿದ್ದು ಶಿಕ್ಷಕರು ಸೇವಾ ಮನೋಭಾವನೆಯಿಂದ ಸೇವೆ ಸಲ್ಲಿಸುವ ಮೂಲಕ ಸಮಾಜದ ಸತ್ಪ್ರಜೆಗಳನ್ನು ರೂಪಿಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಸಣ್ಣ ಕೈಗಾರಿಕೆ ಸಚಿವ ಎಸ್.ಆರ್.ಶ್ರೀನಿವಾಸ್ ಕರೆನೀಡಿದರು.
ಪಟ್ಟಣದ ಎಸ್.ಸಿ.ಎಸ್ ಕಲಾಣ ಮಂದಿರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ತಾಲ್ಲೂಕು ಶಿಕ್ಷಕರ ದಿನಾಚರಣೆ ಸಮಿತಿ ಸಹಯೋಗದಲ್ಲಿ ಡಾ:ಸರ್ವಪಲ್ಲಿ ರಾಧಾಕೃಷ್ಣನ್ ಅವರ 131 ನೇ ಜಯಂತ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕರು ಸಮಾಜದ ಸತ್ಪ್ರಜೆಗಳನ್ನು ತಯಾರು ಮಾಡುವ ಶಿಲ್ಪಿಗಳಿದ್ದಂತೆ ಶಿಕ್ಷಕರ ಸೇವೆ ಮಹತ್ವ ಪೂರ್ಣವಾದುದೆಂದು ತಿಳಿಸಿದರು.
ಸಮಾಜದ ಸರ್ವತೋಮುಖ ಪ್ರಗತಿಗೆ ಶಿಕ್ಷಣ ಅನಿವಾರ್ಯವಾಗಿದ್ದು ಶಿಕ್ಷಕ ಸಮುದಾಯ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಆದರ್ಶ ವಿದ್ಯಾರ್ಥಿಗಳನ್ನು ರೂಪಿಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದ ಅವರು ಇತ್ತೀಚಿನ ದಿನಗಳಲ್ಲಿ ಶಿಕ್ಷಕರಿಗೆ ಕೆಲಸದ ಒತ್ತಡ ಹೆಚ್ಚಾಗುತ್ತಿದ್ದು ಪ್ರತಿ ನಿತ್ಯ ಒಂದಿಲ್ಲೊಂದು ಕೆಲಸಗಳನ್ನು ನಿರ್ವಹಿಸಬೇಕಾದ ಅನಿವಾರ್ಯತೆ ಉಂಟಾಗಿದೆ ಇದರ ಜೊತೆಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಕಲಿಸಬೇಕಾಗಿದೆ ಶಿಕ್ಷಕರು ಸೇವಾ ಮನೋಭಾವನೆಯಿಂದ ಉತ್ತಮ ಕಾರ್ಯ ನಿರ್ವಹಿಸುವ ಮೂಲಕ ಸಮಾಜದ ಸತ್ಪ್ರಜೆಗಳನ್ನು ನಿರ್ಮಾಣ ಮಾಡುವತ್ತ ಮಹತ್ವದ ಚಿಂತನೆ ಮಾಡಬೇಕಿದೆ ಎಂದು ತಿಳಿಸಿದರು.
ಇಂದಿನ ಸ್ಪರ್ಧಾತ್ಮಕತೆಗನುಗುಣವಾಗಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವುದು ಅತ್ಯವಶ್ಯಕವಾಗಿದ್ದು ಶಿಕ್ಷಣದ ಜೊತೆಗೆ ಪ್ರಾಮಾಣಿಕತೆ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕಾಗಿದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಕರು ಕಂಪ್ಯೂಟರ್ ನಂತೆ ಕೆಲಸ ಮಾಡಬೇಕಾಗಿದೆ ಶಿಕ್ಷಣ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು ಶಿಕ್ಷಕರು ಬದಲಾದ ವ್ಯವಸ್ಥೆಗನುಗುಣವಾಗಿ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಸಂಸ್ಕಾರಗಳನ್ನು ಇಂದಿನ ವಿದ್ಯಾರ್ಥಿಗಳಿಗೆ ಕಲಿಸಬೇಕಾಗಿದೆ ಈ ನಿಟ್ಟಿನಲ್ಲಿ ಶಿಕ್ಷಕರು ಸೇವಾ ಮನೋಭಾವದಿಂದ ಉತ್ತಮ ಕಾರ್ಯ ಮಾಡುವತ್ತ ಮುಂದಾಗುವಂತೆ ಕರೆನೀಡಿದರು.
ದಿವ್ಯ ಸಾನಿಧ್ಯ ವಹಿಸಿದ್ದ ಬಿ.ಕೋಡಿಹಳ್ಳಿ ಮಠದ ಶ್ರೀಬಸವಬೃಂಗೇಶ್ವರ ಸ್ವಾಮೀಜಿ ಮಾತನಾಡಿ ಆದುನೀಕತೆ ಬೆಳೆದಂತೆ ಮಾನವೀಯ ಮೌಲ್ಯಗಳು ಕುಸಿಯುತ್ತಿರುವ ಸಂದರ್ಭದಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಕಲಿಸಿಕೊಡುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ಶಿಕ್ಷಕರು ನಡೆದಾಡುವ ಶಾಲೆಗಳಿದ್ದಂತೆ ಶಿಕ್ಷಕ ವೃತ್ತಿ ಪರಮ ಪವಿತ್ರವಾದುದಾಗಿದ್ದು ಸೇವಾ ಮನೋಭಾವನೆಯಿಂದ ಸಮಾಜದ ಸತ್ಪ್ರಜೆಗಳನ್ನು ರೂಪಿಸುವತ್ತ ಚಿಂತನೆ ನಡೆಸಬೇಕಿದೆ ಎಂದ ಅವರು ಡಾ:ಸರ್ವಪಲ್ಲಿ ರಾಧಾಕೃಷ್ಣನ್ ಅವರ ತತ್ವಾಧರ್ಶಗಳನ್ನು ಶಿಕ್ಷಕರು ಅಳವಡಿಸಿಕೊಂಡಾಗ ಮಾತ್ರ ಆದರ್ಶ ಶಿಕ್ಷಕರಾಗಲು ಸಾಧ್ಯ ಎಂದು ತಿಳಿಸಿದರು.
ಶಿಕ್ಷಕರು ಅಧ್ಯಯನ ಶೀಲರಾಗಬೇಕು ಅಲ್ಲದೆ ಕ್ರಿಯಾಶೀಲರಾಗಿ ತಮ್ಮ ಭೋಧನಾ ಕೌಶಲ್ಯವನ್ನು ಹೆಚ್ಚಿಸಿಕೊಂಡು ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವತ್ತ ಚಿಂತನೆ ನಡೆಸಬೇಕೆಂದು ಕರೆನೀಡಿದ ಅವರು ಆದುನೀಕತೆ ಬೆಳೆದಂತೆ ನಮ್ಮ ಸಾಮಾಜಿಕ ಮೌಲ್ಯಗಳು ಕುಸಿಯುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ನೈತಿಕ ಮತ್ತು ಮೌಲ್ಯಧಾರಿತ ಶಿಕ್ಷಣ ಅತ್ಯವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಶಿಕ್ಷಕರು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ತಿಳಿಸಿದರು.
ಜಿಲ್ಲಾ ಪಂಚಾಯ್ತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಡಾ:ನವ್ಯಬಾಬು ಮಾತನಾಡಿ ಭಾರತೀಯ ಸಂಸ್ಕøತಿಯಲ್ಲಿ ಗುರು ಪರಂಪರೆಗೆ ಮಹತ್ವದ ಸ್ಥಾನವಿದೆ ಗುರುಗಳು ಸೇವಾ ಮನೋಭಾವನೆಯಿಂದ ಆಧರ್ಶ ವಿದ್ಯಾರ್ಥಿಗಳನ್ನು ರೂಪಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವತ್ತ ಚಿಂತನೆ ನಡೆಸಬೇಕಿದೆ ಎಂದ ಅವರು ಶೈಕ್ಷಣಿಕ ಪ್ರಗತಿಯಿಂದ ಮಾತ್ರ ರಾಷ್ಟ್ರದ ಸರ್ವತೋಮುಖ ಅಭಿವೃಧ್ದಿ ಸಾಧ್ಯ ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರನ್ನು ಅಭಿನಂಧಿಸಲಾಯಿತು. 2017-18 ನೇ ಸಾಲಿನಲ್ಲಿ ನಿವೃತ್ತರಾದ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಲ್ಯಾಪ್ ಟಾಪ್ಗಳನ್ನು ವಿತರಿಸಲಾಯಿತು.
ಸಮಾರಂಭದಲ್ಲಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಅನುಸೂಯ, ಉಪಾಧ್ಯಕ್ಷೆ ಜಿ.ಕಲ್ಪನ, ಪಟ್ಟಣ ಪಂಚಾಯ್ತಿ ಸದಸ್ಯರಾದ ಸಿ.ಮೋಹನ್, ಕುಮಾರ್, ಜಿಲ್ಲಾ ಪಂಚಾಯ್ತಿ ಸದಸ್ಯರುಗಳಾದ ಜಿ.ರಾಮಾಂಜಿನಯ್ಯ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ಆ.ನಾ.ಲಿಂಗಪ್ಪ, ಮಂಜುಳ, ಉಪನಿರ್ಧೇಶಕ ಕೆ.ಮಂಜುನಾಥ್, ಕ್ಷೇತ್ರ ಶಿP್ಪ್ಷಣಾಧಿಕಾರಿ ಎನ್.ವೆಂಕಟೇಶಪ್ಪ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್.ಜಗದೀಶ್, ಅಕ್ಷರ ದಾಸೋಹ ಸಹಾಯಕ ನಿರ್ಧೇಶಕ ಯೋಗಾನಂದ್, ಬಿ.ಆರ್.ಸಿ ಸಿದ್ದಲಿಂಗಸ್ವಾಮಿ, ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ಅಶ್ವಥಯ್ಯ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಾಂತರಾಜು, ಜಿಲ್ಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಉಮೆಶ್, ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಷಡಾಕ್ಷರಿ, ಕಾರ್ಯದರ್ಶಿ ಶಾಂತರಾಜು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಜಿ.ನಾಗಭೂಷಣ್, ರಾಜ್ಯ ಪರಿಷತ್ ಸದಸ್ಯ ಕೆ.ವಿ.ನಾರಾಯಣ್, ಕಾರ್ಯದರ್ಶಿ ನಿಜಾನಂದಮೂರ್ತಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದಯಾನಂದ ಸರಸ್ವತಿ, ಕಾರ್ಯದರ್ಶಿ ಹೆಚ್.ಕೆ.ಭೈರಯ್ಯ, ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಲ್.ರಾಜಣ್ಣ, ಉಪಾಧ್ಯಾಯರ ಸಹಾರ ಸಂಘದ ಅಧ್ಯಕ್ಷ ಟಿ.ಎಸ್.ಶಿವಣ್ಣ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಸಹ ಕಾರ್ಯದರ್ಶಿ ದಯಾನಂದ್, ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರುಗಳಾದ ಎನ್.ರಾಜಣ್ಣ, ಎ,ಬಿ,ಕಾಂತರಾಜು, ಕಾರ್ಯದರ್ಶಿಗಳಾದ ಸಿದ್ದರಾಮಯ್ಯ, ಸದಾಶಿವಯ್ಯ, ಜಿಲ್ಲಾ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸತ್ಯಪ್ರಕಾಶ್, ತಾಲ್ಲೂಕು ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸಂಜೀವಯ್ಯ, ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಂ.ರವೀಶ್,ಕಾರ್ಯದರ್ಶಿ ಆನಂದ್, ಶಿಕ್ಷಣ ಸಂಯೋಜಕ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಬಿ.ಸಿ.ಶಿವಣ್ಣ, ಕಾಂತರಾಜು, ಸಿದ್ದಲಿಂಗೇಗೌಡ, ಅನುದಾನ ರಹಿತ ಶಾಲೆಗಳ ಸಂಘದ ಅಧ್ಯಕ್ಷ ರಾಜಶೇಖರ್, ಕಾರ್ಯದರ್ಶಿ ಅರುಣ್ ಕುಮಾರ್ ಸೇರಿದಂತೆ ಸಿ.ಆರ್.ಪಿ. ಬಿ.ಆರ್.ಪಿಗಳು ಭಾಗವಹಿಸಿದ್ದರು.