ದಕ್ಷಿಣ ಒಳನಾಡಿನಲ್ಲಿ ಸಂಕ್ರಾಂತಿಯಿಂದ ಎರಡು ದಿನಗಳ ಕಾಲ ಮಳೆ

ಬೆಂಗಳೂರು

  ಕರ್ನಾಟಕದಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನಲ್ಲಿ ಸಂಕ್ರಾಂತಿಯಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಲೆಯಾಗಲಿದೆ.

   ಎಚ್​ಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
  ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಬೀದರ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 10.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

  ಧಾರವಾಡದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recent Articles

spot_img

Related Stories

Share via
Copy link