ಪ್ರಜ್ವಲ್‌ ವಿರುದ್ಧ 2ನೇ FIR ದಾಖಲು ….!

ಹಾಸನ:

      ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆಯೊಬ್ಬರು ತಮ್ಮ ಮೇಲೆ ಪ್ರಜ್ವಲ್ ರೇವಣ್ಣ 3 ವರ್ಷ ಅತ್ಯಾಚಾರ ವೆಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

     ಸೆಕ್ಸ್ ಹಗರಣದಲ್ಲಿ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಇಂದು ಮತ್ತೊಂದು ಎಫ್ ಐಆರ್ ದಾಖಲಾಗಿದ್ದು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆಯೊಬ್ಬರು ತಮ್ಮ ಮೇಲೆ ಪ್ರಜ್ವಲ್ ರೇವಣ್ಣ 3 ವರ್ಷ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಸಿಐಡಿ ಗೆ ದೂರು ನೀಡಿದ್ದಾರೆ.

    ಮೂಲಗಳ ಪ್ರಕಾರ ಸುಮಾರು 40 ವರ್ಷ ವಯಸ್ಸಿನ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ತಮ್ಮ ದೂರಿನಲ್ಲಿ ಪ್ರಜ್ವಲ್ ರೇವಣ್ಣ ತಮ್ಮ ಮೇಲೆ 3 ವರ್ಷಗಳ ಕಾಲ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ. ನಮ್ಮ ದೈಹಿಕ ಸಂಪರ್ಕದ ಸನ್ನಿವೇಶಗಳನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಅವುಗಳನ್ನು ಸಾಮಾಜಿ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಹೇಳಿ ಬೆದರಿಸಿ ಪದೇ ಪದೇ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದರು.

    ಜನವರಿ 1, 2021 ಮತ್ತು ಏಪ್ರಿಲ್ 25, 2024 ರ ನಡುವೆ ತನ್ನ ಮೇಲೆ ನಿರಂತರವಾ ಅತ್ಯಾಚಾರ ಮಾಡಿದ್ದು, ಲೈಂಗಿಕವಾಗಿ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಅಲ್ಲದೆ ಸಿಐಡಿ ಬಳಿ ಮೇ 1 ರಂದು ಪ್ರಕರಣ ದಾಖಲಿಸಿದ್ದು, ಈ ಮೂಲಕ ಪ್ರಜ್ವಲ್ ರೇವಣ್ಣ ವಿರುದ್ಧ 2ನೇ ಎಫ್ ಐಆರ್ ದಾಖಲಾದಂತಾಗಿದೆ.

ಸಂತ್ರಸ್ಥೆಯ ದೂರಿನಲ್ಲೇನಿದೆ?

    ಸಂತ್ರಸ್ಥೆ ನೀಡಿರುವ ದೂರಿನಲ್ಲಿ, ‘2021ರಲ್ಲಿ ಸರ್ಕಾರಿ ಬಿಸಿಎಂ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರಿಗೆ ಸೀಟು ಕೊಡಿಸಲು ತಾನು ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಭೇಟಿಯಾಗಲು ತೆರಳಿದ್ದೆ. ನಾನು ಸಂಸದ ಪ್ರಜ್ವಲ್ ರೇವಣ್ಣ ಕ್ವಾರ್ಟರ್ಸ್‌ನಲ್ಲಿ ಅವರನ್ನು ಭೇಟಿ ಮಾಡಿದ್ದೆ. ಪ್ರಜ್ವಲ್ ರೇವಣ್ಣ ಮೊದಲ ದಿನ ನನ್ನನ್ನು ಭೇಟಿ ಮಾಡಲಿಲ್ಲ. ಮರುದಿನ ಹಾಸನದ ಎಂಪಿ ನಿವಾಸಕ್ಕೆ ಪ್ರಜ್ವಲ್ ರೇವಣ್ಣ ತಮ್ಮನ್ನು ಕರೆಸಿಕೊಂಡಿಡರು. ನೆಲ ಮಹಡಿಯಲ್ಲಿ ಹೆಚ್ಚಿನ ಜನ ಇದ್ದರಿಂದ ಮೇಲ್ಮಹಡಿಯಲ್ಲಿ ಕಾಯುವಂತೆ ಹೇಳಿದ್ದಾರೆ. ಮೆಲ್ಮಹಡಿಯಲ್ಲಿ ಇನ್ನೂ ಕೆಲ ಮಹಿಳೆಯರು ಇದ್ದಾರೆ ಅವರ ಜೊತೆ ಕಾಯುವಂತೆ ಪ್ರಜ್ವಲ್​ ರೇವಣ್ಣ ಸಂತ್ರಸ್ತೆಗೆ ಹೇಳಿದ್ದಾರೆ.

 

ಹಲವು ಸೆಕ್ಷನ್ ಗಳಲ್ಲಿ ಪ್ರಜ್ವಲ್ ರೇವಣ್ಣ ವಿರುದ್ದ ಪ್ರಕರಣ ದಾಖಲು

      ಮಹಿಳೆ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಜ್ವಲ್ ರೇವಣ್ಣ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (2) (ಎನ್) (ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗುವುಗು), 354 (ಎ) (1) (ದೈಹಿಕ ಸಂಪರ್ಕ ಮತ್ತು ಅನಪೇಕ್ಷಿತ ಮತ್ತು ಸ್ಪಷ್ಟ ಲೈಂಗಿಕ ಪ್ರಚೋದನೆಗೆ ಒತ್ತಾಯ), 354 (ಬಿ) (ವಿವಸ್ತ್ರಗೊಳಿಸುವ ಉದ್ದೇಶದಿಂದ ಮಹಿಳೆಗೆ ಕ್ರಿಮಿನಲ್ ಬಲದ ಆಕ್ರಮಣ ಅಥವಾ ಒತ್ತಾಯ) 354(c) (voyeurism-ಅಶ್ಲೀಲ ಚಿತ್ರ ರೆಕಾರ್ಡ್ ಮಾಡಿಕೊಳ್ಳುವುದು) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ವಿಭಾಗ 66(e) (ಗೌಪ್ಯತೆ ಉಲ್ಲಂಘನೆ)ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap