ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…!

ಬೆಂಗಳೂರು:

     ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ  ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ಏಪ್ರಿಲ್ 21ರಂದು   ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ.

     ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023 ರಿಂದ 29-03-2023ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ.

    ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ   ಪ್ರಕಟಿಸುವ ಸಂಬಂಧ ದಿನಾಂಕ 21-04-2023ರಂದು ಬೆಳಿಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 21-04-2023ರಂದು ಬೆಳಿಗ್ಗೆ 11 ಗಂಟೆಯ ನಂತ್ರ ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap