ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ಸಮಿತಿ ರಚಿಸಲಾಗಿತ್ತು. ಭಕ್ತವತ್ಸಲ ಸಮಿತಿಯ 5 ಶಿಫಾರಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದರು.
ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಚುನಾವಣೆ ನಿರ್ವಹಣೆ, ಆಡಳಿತ ಸುಧಾರಣಾ ಇಲಾಖಾ ವ್ಯಾಪ್ತಿಗೆ ತರುವ ಶಿಫಾರಸ್ಸನ್ನು ಇಂದು ಕ್ಯಾಬಿನೆಟ್ ಒಪ್ಪಿದ್ದು, ಈ ಹಿಂದೆ ಪಂಚಾಯತ್ ರಾಜ್ ಇಲಾಖೆ ಜೊತೆಗೆ ಚುನಾವಣಾ ಆಯೋಗ ಸಮನ್ವಯ ಸಾಧಿಸುತ್ತಿತ್ತು. ಇದೀಗ ಆಡಳಿತ ಸುಧಾರಣಾ ಇಲಾಖೆ ಅಡಿಯಲ್ಲಿ ನಿರ್ವಹಣೆ ಮಾಡಲಾಗುವುದು. ರಾಜ್ಯ ಮುಖ್ಯ ಚುನಾವಣಾ ಆಯೋಗ ಕೂಡ ಇನ್ನುಮುಂದೆ ಆಡಳಿತ ಸುಧಾರಣಾ ಇಲಾಖೆ ಜೊತೆಗೆ ಚರ್ಚೆ ಮಾಡಬೇಕು ಎಂದರು.